Kasaragod News:
ಇತಿಹಾಸ ಪ್ರಸಿದ್ಧ ಸರೋವರ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದ ಕಾಸರಗೋಡು, ಕುಂಬಳೆ ಸಮೀಪದ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರದ ಮೊಸಳೆ ಬಬಿಯಾʼ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಕ್ಷೇತ್ರದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಸ್ವೀಕರಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.
ಈ ದೇವಾಲಯದ ಕೆರೆಯ ನಡುವಿನಲ್ಲಿ ನೆಲೆಸಿರುವ ‘ಅನಂತಪದ್ಮನಾಭನಿಗೆ ಮೊಸಳೆ-ಬಬಿಯಾ’ ‘ಕಾವಲು ಕಾಯುವ ಕೆಲಸ’ ಮಾಡುತ್ತದೆ ಎನ್ನುವ ನಂಬಿಕೆ ಇತ್ತು. ನೀರಿನಿಂದ ತುಂಬಿರುವ ಈ ಕೆರೆಯೇ ಮೊಸಳೆಯ ವಾಸಸ್ಥಾನ. ದೇವರ ನೈವೇದ್ಯವೇ ಇದಕ್ಕೆ ನಿತ್ಯ ಆಹಾರ. ಬಬಿಯಾ ಈ ಕೆರೆಯಿಂದ ದೇವಾಲಯದಲ್ಲಿರುವ ದೊಡ್ಡ ಕೆರೆಗೆ ಮನುಷ್ಯರು ನಡೆದಾಡುವ ದಾರಿಯಲ್ಲೇ ಸಾಗುತ್ತಾ ಸ್ವಚ್ಚಂದವಾಗಿ ಜೀವನ ನಡೆಸುತ್ತಿತ್ತು.
ಕ್ಷೇತ್ರದಲ್ಲೊಂದು ನಿರುಪದ್ರವಿ ಮೊಸಳೆ ಇರುವುದರಿಂದಲೇ ಅನಂತಪುರ ಕ್ಷೇತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುತೂಹಲ ಮೂಡಿಸಿ ಜನಪ್ರಿಯತೆ ಪಡೆದಿತ್ತು. ಸ್ವಾತಂತ್ರ‍್ಯ ಪರ್ವದಲ್ಲೇ ಕ್ಷೇತ್ರದಲ್ಲಿ ಮೊಸಳೆ ಇತ್ತು. ಅದನ್ನ ಈ ಪ್ರದೇಶದಲ್ಲಿ ಮಿಲಿಟರಿ ಕ್ಯಾಂಪ್ ಹಾಕಿದ್ದ ಬ್ರಿಟೀಷರು ಗುಂಡಿಕ್ಕಿ ಕೊಂದಿದ್ದರಂತೆ. ತದನಂತರ ಮತ್ತೊಂದು ಮೊಸಳೆ ಮರಿ ತಾನಾಗಿಯೇ ಕೆರೆಯಲ್ಲಿ ಪ್ರತ್ಯಕ್ಷಗೊಂಡಿತ್ತು. ಅದಕ್ಕೆ ಬಬಿಯಾ ಎಂದು ಹೆಸರಿಸಲಾಗಿತ್ತು. ಈ ವರೆಗೆ ಯಾರೊಬ್ಬರಿಗೂ ಉಪಟಳ ಮಾಡದ ದೇವರ ಮೊಸಳೆ ಇತ್ತೀಚಿನ ದಿನದಲ್ಲಿ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿತ್ತು. ಅದಕ್ಕೆ ಚಿಕಿತ್ಸೆಯೂ ನಡೆಯುತಿತ್ತು. ಏತನ್ಮಧ್ಯೆ ನಿನ್ನೆ ರಾತ್ರಿ ಅದು ನೀರಲ್ಲಿ ತೇಲಿತ್ತು.
ಪರಿಸರದ ಭಕ್ತರು ಸೇರಿ ಮೊಸಳೆಯನ್ನು ನೀರಿನಿಂದ ಮೇಲೆತ್ತಿ ಕ್ಷೇತ್ರ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಯಿತು. ತಂತ್ರಿಗಳ ಆಗಮನದ ಬಳಿಕ ಅದರ ಅಂತ್ಯವಿಧಿ ಕ್ರಿಯೆಗಳು ನಡೆಯಲಿದೆ ಎಂದು ಕ್ಷೇತ್ರದ ಟ್ರಸ್ಟಿಗಳು ತಿಳಿಸಿದ್ದಾರೆ.

ಕರ್ನಾಟಕ ಟಿವಿ ಸಹಯೋಗದೊಂದಿಗೆ ಬ್ಯಾಟರಾಯನಪುರದಲ್ಲಿ ಅದ್ಧೂರಿ ದಸರಾ ಮಹೋತ್ಸವ..
ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ದಾರುಣ ಸಾವು..