Sunday, April 13, 2025

Latest Posts

Police : ಅಂದರ್-ಬಾಹರ್ ಆಟ- 12 ಆರೋಪಿಗಳು ಅಂದರ್

- Advertisement -

ಹುಬ್ಬಳ್ಳಿ: ಎಷ್ಟೇ ಎಚ್ಚರಿಕೆ ನೀಡಿದ್ದರೂ ಕದ್ದು ಮುಚ್ಚಿ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 12 ಆರೋಪಿಗಳನ್ನ ವಶಕ್ಕೆ ಪಡೆಯುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ ನೇತೃತ್ವದಲ್ಲಿ ಪಿಎಸ್ಐ ಸೇರಿದಂತೆ ಸಿಬ್ಬಂದಿಗಳು ರೇವಡಿಹಾಳದಲ್ಲಿ ಜೂಜಾಡುತ್ತಿದ್ದವರ ಮೇಲೆ ದಾಳಿ ನಡೆಸಿ, ಏಳು ಆರೋಪಿಗಳನ್ನ ಬಂಧಿಸಿ 16 ಸಾವಿರ ರೂಪಾಯಿ ವಶಕ್ಕೆ ಪಡೆದಿದ್ದಾರೆ.

ಬ್ಯಾಹಟ್ಟಿ ಗ್ರಾಮದ ಬಳಿಯಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಐವರನ್ನ ಬಂಧಿಸಿ, ಒಂಬತ್ತು ಸಾವಿರ ರೂಪಾಯಿ ವಶಕ್ಕೆ ಪಡೆದಿದ್ದು, ಎಲ್ಲರ ಮೇಲೆ ಕಾನೂನು ಕ್ರಮ ಜರುಗಿಸಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರ್ ಚಟುವಟಿಕೆ ನಡೆಯದಂತೆ ಠಾಣೆಯ ಎಲ್ಲರೂ ನಿರಂತರ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ನೆಹರುರನ್ನು ಬೈಯೋದಕ್ಕೆ ನಿಮಗೆ ಅರ್ಹತೆ ಇದೆಯಾ?: ಬಿಜೆಪಿಗೆ ಸಂತೋಷ್ ಲಾಡ್ ಪ್ರಶ್ನೆ..

‘ಪಾರದರ್ಶಕ ಆಡಳಿತ ಕೊಡ್ತೇವೆ ಅಂತ ವಾಗ್ದಾನ ಮಾಡಿದ್ದೇವೆ. ಅದರ ಪ್ರಕಾರ ನಾವು ನಡೆದುಕೊಳ್ತೇವೆ’

‘ನಿವೃತ್ತ ನ್ಯಾಯಮೂರ್ತಿಗಳ ದಿನ ಬೆಳಗಿನ ಕೆಲಸ ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಬಯ್ಯೋದು’

- Advertisement -

Latest Posts

Don't Miss