www.karnatakatv.net : ಬೆಳಗಾವಿ: ಜುಲೈ 19 ಮತ್ತು 22 ರಂದು ನಡೆಯಲಿರುವ sslc ಪರೀಕ್ಷೆಗಳನ್ನು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು, ಪೂರಕ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಸ್ಯಾನಿಟೈಸರ್ ಮಾಡಿದ್ದು, ಸಾಮಾಜಿಕ ಅಂತರ ಮಾಸ್ಕ್ ಅವಶ್ಯ ಕ್ರಮಗಳನ್ನು ನಿಭಾಯಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ತಿಳಿಸಿದೆ. ಇದೆ ವೇಳೆ ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆಯ ಯಾವ ಕೊಠಡಿಯಲ್ಲಿ ಬಂದಿದೆ ಎಂದು ನೋಡುತ್ತಿರುವ ದೃಶ್ಯಗಳು ಕಂಡು ಬಂದವು. ನಗರದ ಸರ್ದಾರ ಕಾಲೇಜಿಗೆ ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಭೇಟಿ ನೀಡಿ, ಪೂರಕ ಸಿದ್ಧತೆ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಈಗಾಗಲೇ ಎಲ್ಲಾ ಪರೀಕ್ಷಾ ಕೇಂದ್ರಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ. ವಿದ್ಯಾರ್ಥಿಗಳು ಭಯ ಬಿಟ್ಟು ಪರೀಕ್ಷೆ ಬರೆಯಬೇಕು, ಮಾಸ್ಕ್ ಸ್ಯಾನಿಟೈಸರ್ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯುವಂತೆ ತಿಳಿಸಿದರು.