ಸಿಬಿಐನಿಂದ ಭ್ರಷ್ಟಾಚಾರ ಪ್ರಕರಣದಲ್ಲಿ ಮಹಾ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅರೆಸ್ಟ್

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು, ಇಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

2021ರ ನವೆಂಬರ್ ನಲ್ಲಿ ದೇಶಮುಖ್ ಅವರನ್ನು ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಈ ಪ್ರಕರಣದಲ್ಲಿ ಅನಿಲ್ ದೇಶಮುಖ್ ಅವರು ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆದ್ರೇ.. ಈ ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಬೆನ್ನಲ್ಲೇ, ಇಡಿ ವಶದಲ್ಲಿದ್ದಂತ ಅವರನ್ನು, ಈಗ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತಮ್ಮ ವಶಕ್ಕೆ ಪಡೆದುಕೊಂಡಿದೆ.

About The Author