ಕೊಪ್ಪಳ: ಗಂಗಾವತಿ ತಾಲೂಕಿನಲ್ಲಿರುವ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಇಂದು ಹನುಮ ಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನು ಗಂಗಾವತಿಯಲ್ಲಿ 100ಕ್ಕೂ ಹೆಚ್ಚು ಸಿಸಿಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್ ಅಪ್ ಚನ್ನವೀರಪ್ಪ ಗಾಮನಗಟ್ಟಿ!
ಅಂಜನಾದ್ರಿಗೆ ಇಂದು ಹನುಮ ಮಾಲೆ ವಿಸರ್ಜನೆಗೆ ಹನುಮ ಮಾಲಾಧಾರಿಗಳು ಆಗಮಿಸುತ್ತಾರೆ. ಹನುಮ ಮಾಲಾಧಾರಿಗಳಿಗೆ ಯಾವುದೇ ತೊಂದರೆ ಆಗಬಾರದೆಂಬ ಉದ್ದೇಶದಿಂದ ಬೀಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನು ಭಕ್ತಾಧಿಗಳಿಗೆ ಪ್ರಸಾದದ ವ್ಯವಸ್ತೆಯನ್ನೂ ಮಾಡಲಾಗಿದೆ. ಮಧ್ಯರಾತ್ರಿಯಿಂದಲೇ ಲಕ್ಷಾಂತರ ಹನುಮ ಮಾಲಾಧಾರಿಗಳು ಮಾಲೆ ವಿಸರ್ಜನೆಗೆ ದೇಶದ ಬೇರೆ ಬೇರೆ ಕಡೆಯಿಂದ 575 ಮೆಟ್ಟಿಲುಗಳನ್ನು ಹತ್ತಿ ಆಗಮಿಸುತ್ತಿದ್ದಾರೆ. ಕೊಪ್ಪಳ ಎಸ್ ಪಿ ಅರುಣಾಂಶುಗಿರಿ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದೆ.
‘ಥಗ್ಸ್ ಆಫ್ ರಾಮಘಡ’ ಮೊದಲ ಸಾಂಗ್ ಬಿಡುಗಡೆ- ಮುಂದಿನ ವರ್ಷ ಸಿನಿಮಾ ತೆರೆಗೆ