Wednesday, October 29, 2025

Latest Posts

ಆಂಜನಪ್ಪ ʼಕೈʼ ಬಿಟ್ಟ ಸಿಎಂ : ಕಾಂಗ್ರೆಸ್ ಪಕ್ಷದಲ್ಲಿ ಕಂಪನ

- Advertisement -

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬುಧವಾರ ಪ್ರಕಟಿಸಿದ ಪಟ್ಟಿಯಲ್ಲಿ, ಕರ್ನಾಟಕ ಬೀಜಾಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನಂದಿ ಆಂಜನಪ್ಪ ಅವರ ಹೆಸರಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೊರಡಿಸಿದ ಅಂತಿಮ ಪಟ್ಟಿಯಿಂದ ಅವರ ಹೆಸರು ಕೈಬಿಡಲಾಗಿದೆ. ಈ ಬೆಳವಣಿಗೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಪಕ್ಷದೊಳಗಿನ ಬಣ ರಾಜಕೀಯವೇ ಇದಕ್ಕೆ ಕಾರಣವೇ ಅಥವಾ ಬೇರೆ ಅಂಶಗಳಿದೆಯೇ ಎನ್ನುವುದರ ಬಗ್ಗೆ ಊಹಾಪೋಹಗಳು ಜೋರಾಗಿವೆ. ನಂದಿ ಆಂಜನಪ್ಪ, ಅಕ್ಕಿ ಆಂಜನಪ್ಪ ಎಂದೇ ಜನಪ್ರಿಯರಾಗಿದ್ದು, 2019ರ ಉಪಚುನಾವಣೆಯಲ್ಲಿ ಡಾ. ಕೆ. ಸುಧಾಕರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಸೋಲುಂಡಿದ್ದರು. ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕೂಡ ಆಂಜನಪ್ಪ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಒಮ್ಮತದಿಂದ ಹಾಲಿ ಶಾಸಕರನ್ನ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದಾದ ನಂತರ ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಎರಡು ಬಣಗಳು ಬಲವಾಗಿ ಬೆಳೆಯುತ್ತಿದೆ.

ಪರಸ್ಪರ ಟೀಕೆಗಳು, ಆರೋಪ-ಪ್ರತ್ಯಾರೋಪಗಳು ನಡೆಯುತ್ತಿದ್ದವು. ಆಂಜನಪ್ಪ ನೇತೃತ್ವದಲ್ಲಿಯೇ ಕೆಪಿಸಿಸಿ ಅಧ್ಯಕ್ಷರಿಗೆ ಶಾಸಕರ ವಿರುದ್ಧ ದೂರು ಸಲ್ಲಿಸಲೂ ಆಗಿತ್ತು. ಇವುಗಳೇ ಅವರ ಹೆಸರನ್ನು ಅಂತಿಮ ಪಟ್ಟಿಯಿಂದ ಕೈಬಿಡಲು ಕಾರಣವೆಂದು ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss