Political News: 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವನಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13ರಂದು ಫಲಿತಾಂಶ ಪ್ರಕಟವಾಗಲಿದೆ.
ಪಶ್ಚಿಮ ಬಂಗಾಳದ ರಾಯ್ ಗಂಜ್, ರಣಘಾಟ್ ದಕ್ಷಿಣ, ಬಾಗ್ಡಾ ಮತ್ತು ಮಾಣಿಕ್ತಾಲಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬಿಹಾರದ ರುಪೌಲಿ, ತಮಿಳುನಾಡಿನ ವಿಕ್ರವಂಡಿ, ಮಧ್ಯಪ್ರದೇಶದ ಅಮರವಾರ, ಉತ್ತರಾಖಂಡದ ಬದರಿನಾಥ್, ಮಂಗಳೌರ್, ಪಂಜಾಬ್ನ ಜಲಂಧರ್ ಪಶ್ಚಿಮ, ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್ಪುರ ಮತ್ತು ನಲಗಢ ವಿಧಾನಸಭಾ ಚನಾವಣೆಯನ್ನು ಘೋಷಣೆ ಮಾಡಲಾಗಿದೆ.
ಜೂನ್ 14ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಜೂನ್ 21 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂನ್ 26 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜುಲೈ 13ರಂದು ಮತಎಣಿಕೆ ನಡೆಯಲಿದೆ.
ಹಾಲಿ ಶಾಸಕರು ಮೃತಪಟ್ಟರೆ ಹಾಗೂ ರಾಜೀನಾಮೆಯಿಂದ ತೆರವಾದ ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ. ಇನ್ನೂ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿರುವ ಕೆಲವ ಕ್ಷೇತ್ರಗಳಿಗೆ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ.
ಮೋದಿ ಪ್ರಮಾಣವಚನ: ಧಾರವಾಡ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಸಂಭ್ರಮ