PDO ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಈಗ ಮತ್ತೊಬ್ಬ ನೌಕರರನ್ನ ಅಮಾನತುಗೊಳಿಸಲಾಗಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಮತ್ತೊಬ್ಬ ಸರ್ಕಾರಿ ನೌಕರನನ್ನು ಸರ್ಕಾರ ಅಮಾನತು ಮಾಡಲಾಗಿದೆ.
ಈ ಹಿಂದೆ ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯ್ತಿ ಪಿಡಿಒಗೆ ಅಮಾನತು ಆದೇಶ ಜಾರಿಯಾಗಿದ್ದರೆ, ಈಗ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರ್ಯನಿರ್ವಹಿಸುತ್ತಿವ ಅಡುಗೆ ಸಹಾಯಕನ ಮೇಲೆ ಕ್ರಮ ಜರುಗಿಸಲಾಗಿದೆ.
ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಅಡುಗೆ ಸಹಾಯಕ ಪ್ರಮೋದ್ ಅವರು, ಸೆಪ್ಟೆಂಬರ್ 13ರಂದು ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣ, ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ತಾಲ್ಲೂಕು ಆಡಳಿತವು ತೀವ್ರ ಗಮನಸೆಳೆಯುವಂತೆ ಕ್ರಮ ಕೈಗೊಂಡಿದೆ.
ಸರ್ಕಾರಿ ನೌಕರರು ಸರ್ಕಾರದಿಂದ ವೇತನ ಪಡೆಯುವ ಹಿನ್ನಲೆಯಲ್ಲಿ ಯಾವುದೇ ಸಂಘ-ಸಂಸ್ಥೆಗಳ ಧಾರ್ಮಿಕ ಅಥವಾ ರಾಜಕೀಯ ಚಟುವಟಿಕೆಯಲ್ಲಿ ಭಾಗವಹಿಸಲು ನಿಷೇಧವಿದೆ ಎಂಬ ನಿಬಂಧನೆ ಉಲ್ಲಂಘನೆಯಾಗಿದೆ ಎಂದು ತಾಲ್ಲೂಕು ಅಧಿಕಾರಿಗಳು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಈ ನಿರ್ಧಾರದಿಂದಾಗಿ ಸರ್ಕಾರಿ ನೌಕರರಲ್ಲಿಂದು ಆತಂಕದ ವಾತಾವರಣ ನಿರ್ಮಾಣವಾಗಿದೆ.
ವರದಿ : ಲಾವಣ್ಯ ಅನಿಗೋಳ