ಸಿಲಿಂಡ‌ರ್ ಸ್ಫೋಟದಿಂದ ಗಾಯಗೊಂಡಿದ್ದ ಮತ್ತೊಬ್ಬ ಮಾಲಾಧಾರಿ ಸಾವು: ಮೃತರ ಸಂಖ್ಯೆ 6ಕ್ಕೆ ಏರಿಕೆ

Hubli News: ಹುಬ್ಬಳ್ಳಿ: ಸಿಲಿಂಡ‌ರ್ ಸ್ಪೋಟದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ರವಿವಾರ 22 ವರ್ಷದ ಮಂಜುನಾಥ ಎಂಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಇದೀಗ 6ಕ್ಕೆ ಏರಿಕೆಯಾಗಿದೆ.

ಉಣಕಲ್‌ನಲ್ಲಿ ಕಳೆದ ರವಿವಾರ ನಡುರಾತ್ರಿ ಸಿಲಿಂಡ‌ರ್ ಸ್ಪೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಈಗಾಗಲೇ 5 ಜನ ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ರವಿವಾರ ಬೆಳ್ಳಿಗ್ಗೆ 10.15ಕ್ಕೆ ಮಂಜುನಾಥ ವಾಗಮೋಡೆ ಎಂಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಬೆಂಕಿ ದುರಂತದಲ್ಲಿ ಮೃತ ಮಂಜುನಾಥ ದೇಹ 70% ಸುಟ್ಟ ಗಾಯಗಳಾಗಿತ್ತು. ಸದ್ಯ ಇನ್ನುಳಿದ 3ಜನರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

About The Author