- Advertisement -
ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಯುವತಿಯೊಬ್ಬಳ ಮೇಲೆ ಮದುವೆಯಾಗಲು ಒಪ್ಪದ ಕಾರಣ, ನಾಗೇಶ್ ಎಂಬಾತ ಆಸಿಡ್ ದಾಳಿ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ, ಇದೀಗ ಪರಿಚಯಸ್ಥರೊಬ್ಬರಿಂದ ಮಹಿಳೆಯ ಮೇಲೆ ಆಸಿಡ್ ದಾಳಿಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ.
ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆಸಿಡ್ ಎರಚಲಾಗಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂದಹಾಗೇ ಮಹಿಳೆಯ ಜೊತೆಗೆ ವೈಮನ್ಸಿನಿಂದಾಗಿ ಅಹ್ಮದ್ ಎಂಬಾತನೇ ತನಗೆ ಪರಿಚಿತವಾಗಿದ್ದಂತ ಮಹಿಳೆಯ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
- Advertisement -