ದೆಹಲಿ: ಮಹಿಳೆ ಎಷ್ಟೇ ಮುಂದುವರೆದಿದ್ದರೂ, ಪುರಷ ಸಮನಾಗಿ ಕೆಲಸ ಮಾಡುತ್ತಿದ್ದರೂ ಅವರ ಮೇಲಿನ ದೌರ್ಜನ್ಯಗಳು ಮಾತ್ರ ಇನ್ನೂ ನಿಂತಿಲ್ಲ. ಇದರ ಕುರಿತು ವಿಶ್ವಸಂಸ್ಥೆಯ ಸೆಕ್ರೆಟರಿ ಆಂಟೋನಿಯೊ ಗುಟರೆಸ್ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ 11 ನಿಮಿಷಗಳಿಗೊಮ್ಮೆ ಮಹಿಳೆಯ ಮೇಲೆ ದೌರ್ಜನ್ಯವಾಗುತ್ತಿದ್ದು, ಅದು ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದ ಮಹಿಳೆಯನ್ನು ಹತ್ಯೆ ಮಾಡಲಾಗುತ್ತಿದೆ. ಇದು ವಿಶ್ವದ ಅತ್ಯಂತ ವ್ಯಾಪಕವಾದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.
ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ
ನವೆಂಬರ್ 25ರಂದು ಆಚರಿಸುವ ಅಂತರಾಷ್ಟ್ರೀಯ ಮಹಿಳೆಯದ ಮೇಲಿನ ದೌರ್ಜನ್ಯ ನಿರ್ಮೂಲನೆ ದಿನದ ಹಿನ್ನೆಲೆ ಗುಟೆರೆಸ್ ಈ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಯುಎ ಸೆಕ್ರೆಟರಿ ಜನರಲ್ ಗುಟರೆಸ್, 2026ರ ವೇಳೆಗೆ ಮಹಿಳಾ ಹಕ್ಕುಗಳ ಸಂಘಟನೆಗಳು ಮತ್ತು ಚಳುವಳಿಗಳಿಗೆ ಶೇ. 50ರಷ್ಟು ಹಣ ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಲೈಂಗಿಕ ಕಿರುಕುಳ, ಮಹಿಳೆಯರು ಮತ್ತು ಹುಡುಗಿಯರು ಸಾಮಾಜಿಕ ಜಾಲತಾಣಗಳಲ್ಲಿ ಹಿಂಸೆ ಅನುಭವಿಸುತ್ತಿದ್ದಾರೆ. ಇಂತಹ ಘಟನೆಗಳು ಮಹಿಳೆಯರ ಬೆಳವಣಿಗೆಯನ್ನು ಕುಗ್ಗಿಸುತ್ತಿವೆ. ದೌರ್ಜನ್ಯ ಮತ್ತು ತಾರತಮ್ಯದಿಂದ ಮಹಿಳೆಯರ ಸ್ವಾತಂತ್ರ್ಯಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಗುಟರೆಸ್ ಹೇಳಿದ್ದಾರೆ.