ಉತ್ತರ ಪ್ರದೇಶ : ಸಮಾಜವಾದಿ ಪಕ್ಷ(Socialist Party)ದ ವರಿಷ್ಠ ಆಗಿರುವ ಮುಲಾಯಂ ಸಿಂಗ್ ಯಾದವ್(Mulayam Singh Yadav) ಅವರ ಕಿರಿಯ ಸೊಸೆ ಅಪರ್ಣಾ ಯಾದವ್(Aparna Yadav) ಬಿಜೆಪಿ ಪಕ್ಷ(BJP party)ಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ(Uttar Pradesh Assembly Elections)ಯ ಫೆಬ್ರವರಿ 10 ರಿಂದ ಮಾರ್ಚ್ 7ರವರೆಗೆ ಹೇಳು ಅಂತ ನಡೆಯಲಿದ್ದು ಈ ಸಂದರ್ಭದಲ್ಲಿ ಅಪರ್ಣ ಯಾದವ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಭಾರೀ ಚರ್ಚೆಗೆ ಒಳಪಟ್ಟಿದೆ. ಪ್ರಾಣಿ ಪ್ರೇಮಿಯಾಗಿರುವ ಅಪರ್ಣ ಯಾದವ್ ಪ್ರಾಣಿಗಳ ರಕ್ಷಣೆಗಾಗಿ ‘ ಬಿ ಅವೇರ್'(Be Aware) ಎನ್ ಜಿ ಒ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಸಹ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಒಂದೆರಡು ವಾರಗಳಲ್ಲಿ ಬಿಜೆಪಿಯಿಂದ ಸಚಿವರು ಹಾಗೂ ಶಾಸಕರು ಸೇರಿದಂತೆ ಏಳೆಂಟು ಮಂದಿ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷಕ್ಕೆ ಸೇರಿಕೊಂಡಿದ್ದರು. ಈಗ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರಿರುವುದು ಸಮಾಜವಾದಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಂತಾಗಿದೆ. ಅಪರ್ಣಾ ಯಾದವ್ ಕೇವಲ ರಾಜಕಾರಣಿ ಅಲ್ಲದೆ ಶಾಸ್ತ್ರೀಯ ಸಂಗೀತ ಗಾಯಕಿ(Classical music singer) ಹಾಗೂ ಯುಕೆಯ ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯ(University of Manchester, UK)ದಿಂದ ಅಂತರಾಷ್ಟ್ರೀಯ ಸಂಬಂಧಗಳು ಮತ್ತು ರಾಜಕೀಯ ವಿಷಯದಲ್ಲಿ ಸ್ನಾತಕೋತ್ತರ ಪದವಿ(Master’s degree)ಯನ್ನು ಪಡೆದಿದ್ದಾರೆ.