- Advertisement -
www.kanatakatv.net : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರೋ ಹಿನ್ನೆಲೆಯಲ್ಲಿ ಕಳೆದ ಸೆಪ್ಟೆಂಬರ್ 12ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸಬೇಕು ಅಂತ ನೀಟ್-ಯುಜಿ ಆಕಾಂಕ್ಷಿಗಳು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಹೀಗಾಗಿ ಹೊಸದಾಗಿ ಪರೀಕ್ಷೆ ನಡೆಸಲು ನಿರ್ದೇಶನ ನೀಡಿ ಹಿಂದಿನ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ತಡೆ ನೀಡಬೇಕು ಎಂದು ಕೋರಿದ್ದಾರೆ.ಎಂಬಿಬಿಎಸ್. ಬಿಡಿಎಸ್, ಬಿಎಎಂಎಸ್, ಬಿಯುಎಂಎಸ್, ಬಿಎಚ್ಎಂಎಸ್ ಕೋರ್ಸ್ಗಳ ಪ್ರವೇಶಾತಿಗೆ ನೀಟ್ ಪರೀಕ್ಷೆಯ ಫಲಿತಾಂಶವನ್ನು ಬಳಸಬಹುದು. ಭಾರತದಲ್ಲಿ ಮಾತ್ರವಲ್ಲದೆ ಮಧ್ಯಪ್ರಾಚ್ಯದಲ್ಲಿರುವ ಭಾರತೀಯ ಸಮುದಾಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ಬಾರಿ ಕುವೈತ್ ಹಾಗೂ ದುಬೈನಲ್ಲಿ ಕೂಡ ನೀಟ್ ಯುಜಿ ಪರೀಕ್ಷೆ ನಡೆಯಲಿದೆ.
- Advertisement -