ಬೆಂಗಳೂರು: 2023ರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಥವಾ ವ್ಯಾಸಂಗ ಮಾಡಿರುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಂದ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯ ನಕಲು ಪ್ರತಿಯೊಂದಿಗೆ ಸ್ವತಹ ಅರ್ಜಿ ಬರೆದು ಪೂರ್ಣ ವಿಳಾಸ ಹಾಗೂ ದೂರವಾಣಿ ಸಂಖ್ಯೆ ಸಹಿತ ಅರ್ಜಿ ಸಲ್ಲಿಸಲು ಜೂನ್ 20 ಕಡೆಯ ದಿನವಾಗಿದ್ದು ಈ ಕೆಳಕಂಡ ವಿಳಾಸಕ್ಕೆ ಅರ್ಜಿ ಸಲ್ಲಿಸಲು ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಚ್.ಎಸ್. ಸುಧೀಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್. ಎಸ್. ಸುಧೀಂದ್ರ ಕುಮಾರ್ ಅಧ್ಯಕ್ಷರು; ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು.
ಎಲ್. ಐ. ಜಿ. 91, 9ನೇ ಅಡ್ಡರಸ್ತೆ. ಹೊಯ್ಸಳ ವೃತ್ತದ ಸಮೀಪ. ಕೆಂಗೇರಿ ಉಪನಗರ. ಬೆಂಗಳೂರು-560060.
ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
‘ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ’
ಕಾಡಾನೆ ಸಮಸ್ಯೆ ನಿವಾರಣೆಗೆ ಅಗತ್ಯಕ್ರಮ, 15 ದಿನಗಳಲ್ಲಿ ರಸ್ತೆಗೆ ಶಾಶ್ವತ ಪರಿಹಾರ: ಶಾಸಕ ಸಿಮೆಂಟ್ ಮಂಜು ಭರವಸೆ