ಚಿಕ್ಕಬಳ್ಳಾಪುರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Office) ಚಿಕ್ಕಬಳ್ಳಾಪುರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು13 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ, ಐಟಿಐ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ chikkaballapur.nic.in ಗೆ ಭೇಟಿ ನೀಡಬಹುದು.ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಹೆಸರು : ಟೆಕ್ನಿಷಿಯನ್
ಒಟ್ಟು ಹುದ್ದೆಗಳು ; 13
ವಿದ್ಯಾರ್ಹತೆ : ಡಿಪ್ಲೋಮಾ, ಐಟಿಐ
ಉದ್ಯೋಗದ ಸ್ಥಳ : ಚಿಕ್ಕಬಳ್ಳಾಪುರ
ವೇತನ : ಮಾಸಿಕ ₹ 15,000
ಅರ್ಜಿ ಸಲ್ಲಿಕೆ ಆರಂಭ ದಿನಾಂಕ ; 18-12-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-12-2021
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ನೇಮಕಾತಿಯ ಟೆಕ್ನಿಷಿಯನ್ (Technician)ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ-ಬೋರ್ಡ್ನಿಂದ ಕಡ್ಡಾಯವಾಗಿ ಬಯೋ ಮೆಡಿಕಲ್- ಎಲೆಕ್ಟ್ರಿಕಲ್- ಎಲೆಕ್ಟ್ರಾನಿಕ್ಸ್- ಇನ್ಸ್ಟ್ರುಮೆಂಟೇಶನ್- ಮೆಕ್ಯಾನಿಕಲ್ ವಿಭಾಗದಲ್ಲಿ ಡಿಪ್ಲೋಮಾ- ಐಟಿಐ ಪಾಸಾಗಿರಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ನೇಮಕಾತಿಯ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಆಸ್ಪತ್ರೆಯಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಅಥವಾ ಮೆಡಿಕಲ್ ಎಕ್ವಿಪ್ಮೆಂಟ್ಸ್/ಮೆಡಿಕಲ್ ಆಕ್ಸಿಜನ್ನಲ್ಲಿ ಕೆಲಸ ಮಾಡಿದ ಅನುಭವ ಇರಬೇಕು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ನೇಮಕಾತಿಯ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 15,000 ವೇತನ ನೀಡಲಾಗುತ್ತದೆ.




