6ನೇ ತರಗತಿಗಾಗಿ ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಾವೇರಿ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 14 ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಸರ್ಕಾರದ ಅಥವಾ ಅಂಗೀಕೃತ ಶಾಲೆಗಳಲ್ಲಿ 5 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಮೌಲಾನಾ ಆಜಾದ್ ಮಾದರಿ ಶಾಲೆಯು ಸರ್ಕಾರಿ ಶಾಲೆಯಾಗಿದ್ದು, ಆಂಗ್ಲ ಮಾಧ್ಯಮದಲ್ಲಿ ಬೋಧಿಸಲಾಗುತ್ತದೆ. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ಮೇರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಲ್ಪಸಂಖ್ಯಾತರ ವರ್ಗಗಳಿಗೆ ಶೇ.75 ರಷ್ಟು ಹಾಗೂ ಇತರೇ ಹಿಂದುಳಿದ ವರ್ಗದವರಿಗೆ ಶೇ.25 ರಷ್ಟು ಮೀಸಲಾತಿ ಇದೆ. ಕುಂಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷದೊಳಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ(ದೃಢೀಕೃತ) ಸಲ್ಲಿಸಬೇಕು.

ಶಾಲೆಗಳ ವಿವರ: ಹಾವೇರಿ ತಾಲೂಕಿನ ಹಾವೇರಿ, ಹೊಸರಿತ್ತಿ, ಬ್ಯಾಡಗಿ ತಾಲೂಕಿನ ಬ್ಯಾಡಗಿ ಮತ್ತು ಕಾಗಿನೆಲೆ, ಹಾನಗಲ್ ತಾಲೂಕಿನ ಹಾನಗಲ್, ಅಕ್ಕಿಆಲೂರು, ಶಿರಗೋಡ, ರಾಣೇಬೆನ್ನೂರು, ಹಿರೇಕೆರೂರು ತಾಲೂಕಿನ ಹಿರೇಕೆರೂರು ಹಾಗೂ ರಟ್ಟಿಹಳ್ಳಿ, ಶಿಗ್ಗಾಂವ ತಾಲೂಕಿನ ಶಿಗ್ಗಾಂವ, ಬಂಕಾಪುರ, ಕುನ್ನೂರ ಹಾಗೂ ಸವಣೂರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ನಿಗದಿತ ಅರ್ಜಿ ನಮೂನೆಗಳನ್ನು ಆಯಾ ತಾಲೂಕಿನ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ಅದೇ ಶಾಲೆಗಳಿಗೆ ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author