ಹಾವೇರಿ: ಧಾರವಾಡ ಸಾರ್ವಜನಿಕ ಗ್ರಂಥಾಲಯ ಇಲಾಖೆ ಕೇಂದ್ರದಲ್ಲಿ ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಳಗಾವಿ ಕಂದಾಯ ವಿಭಾಗದ ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಕಾರವಾರ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ.ಅಂಕಪಟ್ಟಿ, ವರ್ಗಾವಣೆ ಪ್ರಮಾಣಪತ್ರ (ಟಿಸಿ/ಎಲ್.ಸಿ), ಜಾತಿ ಹಾಗೂ ಆದಾಯ, ಗ್ರಾಮೀಣ ಮಹಿಳೆ, ಮಾಜಿ ಸೈನಿಕ, ಅಂಗವಿಕಲ, ಕನ್ನಡ ಮಾಧ್ಯಮ, ಯೋಜನಾ ನಿರಾಶ್ರೀತರ, ಇತರೆ ಪ್ರಮಾಣಪತ್ರಗಳ ದೃಢೀಕೃತ ನಕಲು ಪ್ರತಿಗಳನ್ನು ಸಲ್ಲಿಸಬೇಕು. ಅರ್ಜಿ ಶುಲ್ಕ ರೂ.20 ಪೋಸ್ಟ್‍ಲ್ ಆರ್ಡ್‍ರ ಅಥವಾ ಡಿಡಿಯನ್ನು ಉಪನಿರ್ದೇಶಕರು, ನಗರ ಕೇಂದ್ರ ಗ್ರಂಥಾಲಯ, ಧಾರವಾಡದ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಯ ಹೆಸರಿಗೆ ಪಡೆದು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಿ ಪಡೆಯಬಹುದು.
ಗ್ರಂಥಾಲಯ ಇಲಾಖೆಯಲ್ಲಿ ಹಾಲಿ ಸೇವೆ ಸಲ್ಲಿಸುತ್ತಿರುವ ‘ಡಿ’ ದರ್ಜೆಯ ಗ್ರಂಥಾಲಯ ಸಹವರ್ತಿಗಳು, ಗ್ರಾಮ ಪಂಚಾಯತಿ ಮೇಲ್ವಿಚಾರಕರು ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಆಧಿಕಾರಿ(ಪಿಡಿಒ) ಹಾಗೂ ಉಪನಿರ್ದೇಶಕರು, ಮುಖ್ಯಗ್ರಂಥಾಲಯಾಧಿಕಾರಿಗಳ ಮೂಲಕ ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳಿಂದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ.ಅಂಕಪಟ್ಟಿ, ವರ್ಗಾವಣೆ ಪ್ರಮಾಣಪತ್ರ, ಜಾತಿ, ಆದಾಯ, ಸೇವಗೆ ಸೇರಿದ ದಿನಾಂಕ, ವೇತನ ಪ್ರಮಾಣಪತ್ರ, ನಡುವಳಿಕೆ ಪ್ರಮಾಣಪತ್ರ,ದೃಢೀಕೃತ ನಕಲು ಪ್ರತಿಗಳನ್ನು ಸಲ್ಲಿಸಬೇಕು.
ಅಗತ್ಯ ದಾಖಲೆಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ದಿನಾಂಕ 25-05-2022ರೊಳಗಾಗಿ ಉಪನಿರ್ದೇಶಕರು/ಪ್ರಾಂಶುಪಾಲರು, ಉಪನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಜಿಲ್ಲಾಧಿಕಾರಿಗಳ ಕಚೇರಿ ಆವರಣ ಧಾರವಾಡ-580001 ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



