ಉಚಿತ ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಧಾರವಾಡ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಧಾರವಾಡ, ಗದಗ, ಹಾವೇರಿ ಹಾಗೂ ಕಾರವಾರ ಜಿಲ್ಲೆಗಳ ರೈತ ಮತ್ತು ರೈತ ಮಹಿಳೆಯರಿಗೆ ಉಚಿತವಾಗಿ ಎರಡು ದಿನಗಳ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ. ಆಸಕ್ತರು ತಮ್ಮ ಹೆಸರನ್ನು ಮೊ.9591024499ಎಸ್.ಎಂ.ಎಸ್. ಸಂದೇಶದ ಮೂಲಕ ಅಥವಾ ಕಚೇರಿ ದೂ.0836-2443743 ಅಥವಾ ಮುದ್ದಾಂ ಕಚೇರಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಮುಖ್ಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.