Monday, December 23, 2024

Latest Posts

2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

- Advertisement -

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

2022ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 31ಕೊನೆಯ ದಿನಾಂಕ. ಸೆಪ್ಟೆಂಬರ್ 15ರವರೆಗೆ ದಂಡ ಶುಲ್ಕ ರೂ.50 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.

ರೂ.೨೫-೦೦ ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.

ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.

ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18, ದೂರವಾಣಿ ಸಂಖ್ಯೆ 080-26623584, 26612991, 22423867, 26672992, 9739666834 ಇವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Latest Posts

Don't Miss