ಜಲ ಸಾಹಸ ಕ್ರೀಡಾ ಉಪಕರಣ ಸೌಲಭ್ಯಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಹಾವೇರಿ: ಪರಿಶಿಷ್ಟ ಜಾತಿ ಉಪಯೋಜನೆಯಡಿ 2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಐದು ಕ್ರೀಡಾ ಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಲ ಸಾಹಸ ಕ್ರೀಡಾ ಉಪಕರಣ ಸೌಲಭ್ಯಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಮೂಲಕ ಜಲ ಸಾಹಸ ಕ್ರೀಡೆಯಲ್ಲಿ ತರಬೇತಿ ಪಡೆದು ಪ್ರಮಾಣಪತ್ರ ಹೊಂದಿರುವ ಅಥವಾ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಮಾನ್ಯತೆ ಹೊಂದಿರುವ ಸ್ಪರ್ಧಾತ್ಮಕ ಸಾಹಸ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿರುವ, ಪದಕ ವಿಜೇತ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.

ಆಸಕ್ತರು ನಿಗಧಿತ ಅರ್ಜಿ ನಮೂನೆಯನ್ನು ಹಾವೇರಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಅಗತ್ಯ ದಾಖಲೆಯೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ದಿನಾಂಕ 05-08-2022ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08375-296443 ಸಂಪರ್ಕಿಸಲು ಕೋರಲಾಗಿದೆ.

About The Author