ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಾದಗಿರಿ(District Child Labor Planning Society Yadgir) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್ & ಆಫೀಸ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸರ್ಕಾರಿ ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹೆಚ್ಚಿನ ಮಾಹಿತಿಗಾಗಿ yadgir.nic.in ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ,
ವಿದ್ಯಾರ್ಹತೆ:
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಾದಗಿರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಕೌಂಟೆಂಟ್ & ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಬಿ.ಕಾಂ ಪೂರ್ಣಗೊಳಿಸಿರಬೇಕು.
ಇತರೆ ಅರ್ಹತೆ:
ಅಭ್ಯರ್ಥಿಗಳಿಗೆ ಬೇಸಿಕ್ ಕಂಪ್ಯೂಟರ್ ಜ್ಞಾನ, ಟ್ಯಾಲಿ, ಎಂಎಸ್ ಆಫೀಸ್, ಎಂಎಸ್ ಎಕ್ಸೆಲ್, ಇಂಟರ್ನೆಟ್ ಆಪರೇಷನ್ ಮತ್ತು ಕಡ್ಡಾಯ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಮಾಡಲು ಗೊತ್ತಿರಬೇಕು.
ವಯೋಮಿತಿ:
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಾದಗಿರಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಾದಗಿರಿ ನಿಯಮಾವಳಿ ಪ್ರಕಾರ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಜ್ಞಾನ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನೆ, ಯೋಜನಾ ನಿರ್ದೇಶಕರ ಕಛೇರಿ
ಕೊಠಡಿ ಸಂಖ್ಯೆ A-7, 1 ನೇ ಮಹಡಿ, ಆಡಳಿತ ಭವನ
ಯಾದಗಿರಿ ಜಿಲ್ಲೆ, ಯಾದಗಿರಿ,
ಕರ್ನಾಟಕ.