Wednesday, October 15, 2025

Latest Posts

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ

- Advertisement -

ಶಿವಮೊಗ್ಗ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರ ಕಚೇರಿಯಲ್ಲಿ 7 ಪ್ರಾಸೆಸ್ ಜಾರಿಕಾರ (ಪ್ರಾಸೆಸ್ ಸರ್ವರ್) ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಅರ್ಜಿ ಆಹ್ವಾನಿಸಲಾಗಿದೆ. 7 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 3 ಸ್ಥಾನ, ಎಸ್ಸಿಗೆ 1, ಪ್ರವರ್ಗ 2ಎಗೆ 1, ಪ್ರವರ್ಗ 2ಬಿಗೆ 1, ಪ್ರವರ್ಗ 3ಬಿಗೆ 1 ಸ್ಥಾನ ಮೀಸಲಿರಿಸಲಾಗಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ (2ಎ, 2ಬಿ, 3ಎ, 3ಬಿಗೆ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ1ಕ್ಕೆ 40 ವರ್ಷ)ದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮಾಸಿಕ 19,950- 37,900 ರೂ. ವೇತನ ಜತೆ ಇತರ ಭತ್ಯೆಗಳನ್ನು ನೀಡಲಾಗುವುದು. ಸಾಮಾನ್ಯವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂ. ಹಾಗೂ ಪ್ರವರ್ಗ 2ಎ, 2ಬಿ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಎಸ್ಸಿ, ಎಸ್ಟಿ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಅಭ್ಯರ್ಥಿಯ ಸಾಮಾನ್ಯ ಜ್ಞಾನ, ಕನ್ನಡ ಓದುವ, ಬರೆಯುವ ಪ್ರಾವೀಣ್ಯತೆ ಕುರಿತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೇ ದಿನ: 30.12.2021

ಅಧಿಸೂಚನೆಗೆ: https://bit.ly/3xc4qsN

- Advertisement -

Latest Posts

Don't Miss