Film News:
ಕರುನಾಡ ಮಾಣಿಕ್ಯ ಪುನೀತ್ ರಾಜ್ ಕುಮಾರ್ ಅವರಿಗೆ ಸರಕಾರ ವಿಶೇಷವಾಗಿ ಗೌರವ ಸೂಚಿಸಲು ನಿರ್ಧರಿಸಿದೆ. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನವನ್ನು ಸ್ಫರ‍್ತಿ ದಿನ ಎಂದು ರ‍್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ಅವರಿಗೆ ಧನ್ಯವಾದಗಳು. ಅಪ್ಪು ಜನ್ಮದಿನ, ಮಾರ್ಚ್ 17 ಇನ್ನುಮುಂದೆ ಸ್ಪೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಪೂರ್ತಿಯಾಗಲಿದೆ’ ಎಂದು ಸುನೀಲ್ ಟ್ವೀಟ್ ಮಾಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ @BSBommai ಅವರಿಗೆ ಧನ್ಯವಾದಗಳು.
ಅಪ್ಪು ಜನ್ಮದಿನ, ಮಾರ್ಚ್ 17 ಇನ್ನು ಮುಂದೆ ಸ್ಪೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ.— Sunil Kumar Karkala (@karkalasunil) September 15, 2022
ಕನ್ನಡದಲ್ಲೂ ‘ಆಶಿಕಿ’ ಕಿಕ್..ಇದು ಕ್ರೈಮ್ ರಿಪೋರ್ಟರ್ ಹೆಣೆದ ಮ್ಯೂಸಿಕಲ್ ಲವ್ ಸ್ಟೋರಿ…!