Mandya News : ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ ನಡೆದಿದ್ದು ಆರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮದ್ದೂರು ಪುರಸಭೆ ಜೆಡಿಎಸ್ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್ನಿಂದ ಚುಚ್ಚಿ ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಸದ್ಯ ಗಾಯಗೊಂಡ ಜೆಡಿಎಸ್ ಮುಖಂಡ ಅಪ್ಪುಗೌಡ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹಲ್ಲೆಗೊಳಗಾದ ಆಪ್ಪುಗೌಡ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ದುಷ್ಕರ್ಮಿಗಳು ಕೊಲೆ ಮಾಡಲೆಂದೇ ಪ್ಲಾನ್ ಮಾಡಿಕೊಂಡು ಡ್ರಾಗನ್, ಲಾಂಗ್ ತಂದಿದ್ದರು. ಅಪ್ಪುಗೌಡ ಮೇಲೆ ಹಲ್ಲೆ ನಡೆಸಿದಾಗ ಸ್ಥಳದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಈ ಪರಿಣಾಮ ಸ್ಥಳದಲ್ಲೇ ಲಾಂಗ್ ಬಿಟ್ಟು ಆರೋಪಿಗಳು ಪರಾರಿಯಾಗಲು ಯತ್ನಿಸಿದ್ರು. ಸದ್ಯ ಮದ್ದೂರು ಠಾಣೆ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಹತ್ಯೆಗೆ ಯತ್ನಿಗೆ ಪರಾರಿಯಾಗಿ ಟಾಟಾ ಸುಮೋದಲ್ಲಿ ಹೋಗುವಾಗ ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಅಟ್ಯಾಕ್ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ಹೇಳಲಾಗಿದೆ.