www.karnatakatv.net : ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಇನ್ನು ಈ ಕಾರ್ಯವನ್ನು ಪುನೀತ್ ರಾಜ್ ಕುಮಾರ್ ರವರ ಹಿರಿಯ ಸಹೋದರ ರಾಘವೇಂದ್ರ ರಾಜ್ ಕುಮಾರ್ ರವರ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಸಂಪ್ರದಾಯದoತೆ ಅವರಿಗೆ ಅಂತಿಮ ವಿಧಿ ವಿಧಾನವನ್ನು ನೆರವೇರಿಸಲು ಅವಕಾಶವಿಲ್ಲ. ಹೀಗಾಗಿ ಈ ಬಗ್ಗೆ ದೊಡ್ಮನೆ ಸದಸ್ಯರು, ರಾಘವೇಂದ್ರ ರಾಜ್ ಕುಮಾರ್ ರವರ ಹಿರಿಯ ಪುತ್ರ ವಿನಯ್ ರಾಜ್ ಕುಮಾರ್ ಎಲ್ಲಾ ಕಾರ್ಯಗಳನ್ನು ನೆರವೇರಿಸುವಂತೆ ತೀರ್ಮಾನ ತೆಗೆದುಕೊಂಡಿದ್ದಾರೆ. ಇನ್ನು ಕಂಠೀರವ ಸ್ಟುಡಿಯೋದಲ್ಲಿ ರೋ ರಾಜ್ ಕುಮಾರ್ ಮತ್ತು ಪಾರ್ವತಮ್ಮನವರ ಸಮಾಧಿಯ ಬಳಿಯೇ ಅಪ್ಪು ಅಂತ್ಯಸoಸ್ಕಾರ ನೆರವೇರಿಸಲಾಗುತ್ತೆ. ಇಂದು ಸಂಜೆ ಬಳಿಕ ಅಪ್ಪು, ತಮ್ಮ ತಂದೆ ತಾಯಿಯ ಮಡಿಲು ಸೇರಲಿದ್ದಾರೆ.




