Political News : ಆರಗ ಜ್ಞಾನೇಂದ್ರ ಅವರು ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ ನೆರಳಿಲ್ಲ ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿಯಾಗಿದೆ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ ಅವಮಾನ ಮಾಡಿರುವುದು ನಿಜಕ್ಕೂ ದುರ್ದೈವ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದರು ಈ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಕಸ್ತೂರಿ ರಂಗನ್ ವರದಿ ಅನುಷ್ಠಾನ ಕುರಿತು ಸಚಿವ ಈಶ್ವರ ಖಂಡ್ರೆಯವರ ಹೇಳಿಕೆ ವಿರುದ್ಧ ತೀರ್ಥಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ್ದೇನೆ. ಇಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಎಲ್ಲೂ ನಾನು ಉಲ್ಲೇಖಿಸಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಅನುಭವಿ ರಾಜಕಾರಣಿ, ಹಿರಿಯ ಮುತ್ಸದ್ದಿ. ಅವರನ್ನು ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲ.
ಖರ್ಗೆ ಅಥವಾ ಖಂಡ್ರೆ ಅವರನ್ನು ನೋಯಿಸಲು ಆ ರೀತಿ ಮಾತನಾಡಿಲ್ಲ. ಅದನ್ನು ರಾಜಕೀಯವಾಗಿ ಬಳಸುವುದಾದರೆ ಬಳಸಲಿ. ನನ್ನ ಮಾತಿನಿಂದ ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಆರಗ ಹೇಳಿದರು.
Basavaraj Bommai : ಸರಕಾರದ 6ನೇ ಗ್ಯಾರಂಟಿಯೇ ಬೆಲೆ ಏರಿಕೆ…! : ಸರಕಾರಕ್ಕೆ ಕುಟುಕಿದ ಮಾಜಿ ಸಿಎಂ ಬೊಮ್ಮಾಯಿ
Congress Meeting : ದೆಹಲಿ : ರಾಜ್ಯವನ್ನು ಗೆದ್ದ ಕಾಂಗ್ರೆಸ್ ಪಕ್ಷದಿಂದ ದೇಶ ಗೆಲ್ಲುವ ಯೋಜನಾ ಸಭೆ
K Sudhakar : “ನನ್ನ ಮೌನ ಅಸಹಾಯಕತೆಯಲ್ಲ” : ಪ್ರದೀಪ್ ಈಶ್ವರ್ ಗೆ ಕೌಂಟರ್ ಕೊಟ್ಟ ಸುಧಾಕರ್