Anand Appugol : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾದ ನಿರ್ಮಾಪಕ ಅರೆಸ್ಟ್..!

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾವನ್ನು ನಿರ್ಮಾಣಮಾಡಿದ್ದ ಆನಂದ್ ಅವರನ್ನು 250 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಇವರು ಬೆಳಗಾವಿಯ ಸಂಗೊಳ್ಳಿರಾಯಣ್ಣ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ED ಅಧಿಕಾರಿಗಳು ಇಂದು ಇವರನ್ನು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ನ ಅವ್ಯವಹಾರ ಪ್ರಕರಣದಲ್ಲಿ ಇವರನ್ನ ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪಿಎಂಎಲ್ಎ (PMLA)ಕಾಯಿದೆ ಅಡಿ ದೂರು ದಾಖಲಿಸಿದ್ದರು. ಇವರು ಈ ಬ್ಯಾಂಕ್ ನಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಆನಂದ ಅಪ್ಪುಗೋಳ ಸೇರಿ ಸೊಸೈಟಿ 13 ಜನರು ಠೇವಣಿ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿ ಜಿಲ್ಲಾ ನ್ಯಾಯಾಲಯ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು.

About The Author