Hubballli News: ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ, ಬಿಜೆಪಿ ಪ್ರತಿಭಟನೆ ಹಿನ್ನೆಲೆ, ಶಹರ ಪೊಲೀಸ್ ಠಾಣೆ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಮನ ಭಕ್ತನ ಬಂಧನ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲೂ ಬೃಹತ್ ಪ್ರತಿಭಟನೆ ನಡೆಯಲಿದೆ.
ಇದಕ್ಕಾಗಿ ಶಹರ ಪೊಲೀಸ್ ಠಾಣೆಯ ಎದುರು ಬೃಹತ್ ವೇದಿಕೆ ಸಿದ್ದವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಖಾಂತರ ತೊಡೆ ತಟ್ಟಿದ ಬಿಜೆಪಿ ಸಿದ್ದತೆ ಮಾಡಿಕೊಂಡಿದೆ. ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಳಿಗ್ಗೆ 11-30 ಕ್ಕೆ ಪ್ರತಿಭಟನೆಯಲ್ಲಿ ಆರ್ ಅಶೋಕ ಭಾಗಿಯಾಗಲಿದ್ದು, ಸಂಜೆ 4 ಗಂಟೆಯವರೆಗೆ ಪ್ರತಿಭಟನೆಯಲ್ಲಿ ಅಶೋಕ್ ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಜೊತೆಗೆ ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಪ್ರದೀಪ ಶೆಟ್ಟರ ಸೇರಿದಂತೆ ಅನೇಕ ಹಿಂದೂಪರ ಸಂಘಟನೆ ಕಾರ್ಯಕರ್ತರು, ಎಸ್ ಎಸ್ ಕೆ ಸಮಾಜದ ನಾಯಕರು ಭಾಗಿಯಾಗಲಿದ್ದಾರೆ.
ಅಯೋಧ್ಯೆಗೆ ಹೋಗಲು ನಿರಾಕರಿಸುತ್ತಿದ್ದವರೂ ಈಗ ಆಹ್ವಾನ ಬಯಸುತ್ತಿದ್ದಾರೆ: ಯೋಗಿ ಆದಿತ್ಯವಾಥ್
ರೋಗಿಯ ಕುಟುಂಬಸ್ಥರ ಒಪ್ಪಿಗೆ ಇದ್ದರೆ ಮಾತ್ರ ICUಗೆ ದಾಖಲಿಸಬಹುದು: ಕೇಂದ್ರ ಆಸ್ಪತ್ರೆಯ ಹೊಸ ರೂಲ್ಸ್
ಇತಿಹಾಸದಲ್ಲಿ ಮೊದಲ ಬಾರಿಗೆ ಅಯ್ಯಪ್ಪಸ್ವಾಮಿಯ ದರ್ಶನ ಪಡೆದ ಮಂಗಳಮುಖಿ..