ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

ಹುಬ್ಬಳ್ಳಿ: ನಗರದ ಗೂಡ್ಶೆಡ್ ರಸ್ತೆಯ ಬಿಆರ್ಟಿಎಸ್ ಬಸ್ ನಿಲ್ದಾಣ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರ ತಂಡ ಬಂಧಿಸಿದೆ.

ಹೊರ ರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ತಂಡ, ಬಂಧಿತರಿಂದ 24,700 ರೂ. ಮೌಲ್ಯದ 494 ಗ್ರಾಂ ತೂಕದ ಗಾಂಜಾ ಹಾಗೂ ಮೊಬೈಲ್ ಫೋನ್ ಮತ್ತು ನಗದು ಹಣ ಸೇರಿ ಒಟ್ಟು 32,920 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದೆ. ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇಶದ ಸುಭಿಕ್ಷೆಗಾಗಿ ಬಿಜೆಪಿ ಜತೆ ಹೊಂದಾಣಿಕೆ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿಕೆ

Income Tax : ಐಟಿ ದಾಳಿ : 40 ಕೋಟಿಗೂ ಅಧಿಕ ಹಣ ಲಭ್ಯ…!

‘ನಾವು ಮೈತ್ರಿ ಯಾರ ಜೊತೆಗಾದ್ರು ಮಾಡಿಕೊಳ್ತೀವಿ ಇವರಿಗೇನು..?’

About The Author