- Advertisement -
ಕಾಶ್ಮೀರ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ಮೂವರು ಎಲ್.ಇಟಿ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದ ವಿವಿಧೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ ಇ ಟಿ ಉಗ್ರರನ್ನು ಪುಲ್ವಾಮಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಉಗ್ರರು ಎಲ್ ಇಟಿ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಕಾಶ್ಮೀರದಲ್ಲಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು ಕುಲ್ಗಾಮ್ ನ ಅಶ್ಮುಜಿ ಪ್ರದೇಶದಲ್ಲಿ ಎನ್ ಕೌಂಟರ್ ನಡೆಯುತ್ತಿದೆ. ಇಲ್ಲಿಯವರೆಗೆ ಒಬ್ಬ ಅಪರಿಚಿತ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಕುಲ್ಗಾಮ್ ಪೊಲೀಸ್ ಮತ್ತು ಸೇನೆ ಎನ್ ಕೌಂಟರ್ ಸ್ಥಳದಿಂದ 60 ಶಾಲಾ ಮಕ್ಕಳನ್ನು ರಕ್ಷಿಸಿದ್ದಾರೆ.
- Advertisement -