ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ..!

ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.

ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ ಮಾಡಿದರು. ಕಣಿವೆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಕುರಿತ ಆರ್ಟಿಕಲ್‌ 370 ಹಾಗೂ 35 ಎ ವಿಧಿಯನ್ನು ರದ್ದುಗೊಳಿಸುವ ಮಸೂದೆಯನ್ನ ಅಮಿತ್ ಶಾ ಮಂಡಿಸಿದ್ರು.

ಇಂದು ಬೆಳಗ್ಗೆ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ವಿದೇಶಾಂಗ ಸಚಿವ ಜೈಶಂಕರ್, ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮೊದಲಾದವರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಆರ್ಟಿಕಲ್‌ 35 ಎ ಹಿಂಪಡೆಯುವ ಕುರಿತಂತೆ ಸಂಪುಟ ಸಭೆಯಲ್ಲಿ ಕೈಗೊಂಡ ಸರ್ಕಾರದ ನಿರ್ಧಾರವನ್ನು ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಪ್ರಕಟಿಸುತ್ತಿದ್ದಂತೆ, ವಿಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದರೆ, ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದ್ದಾರೆ.‌

https://www.youtube.com/watch?v=usjV26Sge1k

About The Author