- Advertisement -
www.karnatakatv.net :ಹುಬ್ಬಳ್ಳಿ: ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಶ್ರೀ ಮಲ್ಲಿಕಾರ್ಜುನ ಅಲೆ ಮಾರಿ ಸಂಘ ಹಾಗೂ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘದBegged
ಸದಸ್ಯರು, ನಗರದಲ್ಲಿಂದು ಸಾಂಕೇತಿಕವಾಗಿ ಭಿಕ್ಷಾಟನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಕೋವಿಡ್ ನಿಂದಾಗಿ ಕಳೆದೆರಡು ವರ್ಷಗಳಿಂದ ಎಲ್ಲಾ ಕಾರ್ಯಕ್ರಮಗಳಿಗೂ ನಿಷೇಧ ಹೇರಿರೋದ್ರಿಂದ ನಾವು ಭಿಕ್ಷೆ ಬೇಡುವ ಪರಿಸ್ಥಿತಿ ತಲುಪಿದ್ದೇವೆ ಅಂತ ಕಲಾವಿದರು ಅಳಲು ತೋಡಿಕೊಂಡ್ರು. ಕೂಡಲೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಹೇರಿರೋ ನಿಷೇಧ ತೆರವುಗೊಳಿಸ ಬೇಕು ಅಂತ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ರು.
ಕರ್ನಾಟಕ ಟಿವಿ- ಹುಬ್ಬಳ್ಳಿ
- Advertisement -