Thursday, April 3, 2025

Latest Posts

ಕೇಜ್ರಿವಾಲ್​ಗೆ ಮತ್ತೆ ಹಿನ್ನಡೆ- ಜೈಲೇ ಗತಿ!

- Advertisement -

ಅಬಕಾರಿ ನೀತಿ ಜಾರಿ ವೇಳೆ ಹಗರಣದಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಕಾನೂನು ಸಮರದಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ.
ಕೇಜ್ರಿವಾಲ್​ಗೆ ಜಾಮೀನು ಮಂಜೂರು ಮಾಡಿದ್ದ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ ಆದೇಶಕ್ಕೆ ದೆಹಲಿ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಕೇಜ್ರಿವಾಲ್‌ಗೆ ನಿರಾಸೆಯಾಗಿದೆ.
ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ನಾವು ಆದೇಶ ಹೊರಡಿಸಿದರೆ, ಅದು ಪೂರ್ವಾಗ್ರಹಪೀಡಿತ ಆದೇಶ ಎಂದೆನಿಸಿಕೊಳ್ಳಲಿದೆ ಎಂದು ಹೇಳಿದೆ. ಹೀಗಾಗಿ ವಿಚಾರಣೆಯನ್ನು ಜೂ.26ರಂದು ಮುಂದೂಡಲಾಗಿದೆ. ಕೇಜ್ರಿವಾಲ್​ಗೆ ರೋಸ್‌ ಅವೆನ್ಯೂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇ.ಡಿ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು.

- Advertisement -

Latest Posts

Don't Miss