ಬೆಂಗಳೂರು: ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ “ನಾನೇನು ರೇಪ್ ಮಾಡಿದ್ನಾ” ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ? ಎಂದು ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.
ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ "ನಾನೇನು ರೇಪ್ ಮಾಡಿದ್ನಾ" ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ.
ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ.
ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ? pic.twitter.com/4aHGnI4MJ0
— Karnataka Congress (@INCKarnataka) September 3, 2022
ಕರ್ನಾಟಕ ಕಾಂಗ್ರೆಸ್ ನಿಂದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ, ಶಾಸಕ ಅರವಿಂದ ಲಿಂಬಾವಳಿ ನಡೆಯ ಬಗ್ಗೆ ತೀವ್ರ ತರಾಟೆಯನ್ನು ಟ್ವಿಟ್ಟರ್ ನಲ್ಲಿ ತೆಗೆದುಕೊಂಡಿದೆ. ಮಾಧ್ಯಮಗಳು ಮಹಿಳೆಯರ ಘನತೆಯ ಪರ ಮಾತಾಡಬಾರದೇ? ಮಹಿಳೆಯರು ತಮ್ಮ ಅಹವಾಲು ಹೇಳಬಾರದೇ? ಮಹಿಳೆಯರ ಮೇಲಷ್ಟೇ ಅಲ್ಲ, ಮಾಧ್ಯಮಗಳ ಮೇಲೂ ದಬ್ಬಾಳಿಕೆ ನಡೆಸಿದ್ದಾರೆ ಅರವಿಂದ್ ಲಿಂಬಾವಳಿ. ಇಂತಹ ದರ್ಪ ದೌರ್ಜನ್ಯಕ್ಕೆ, ಕೀಳು ವರ್ತನೆಗೆ ರಾಜ್ಯದ ಜನರು ಪಾಠ ಕಲಿಸುವುದು ನಿಶ್ಚಿತ. ಬಸವರಾಜ ಅವರೇ, ಈ ವರ್ತನೆಗೆ, ಕೀಳು ಮಾತಿಗೆ ನಿಮ್ಮ ಬೆಂಬಲವಿದೆಯೇ? ಎಂದು ಪ್ರಶ್ನಿಸಿದೆ.
‘ಬೇಟಿ ಬಚಾವ್’ ಆಗಬೇಕಿರುವುದು ಬಿಜೆಪಿಯ ಗೂಂಡಾಗಳಿಂದ! ಮನುಶಾಸ್ತ್ರವನ್ನು ನಂಬುವ ಬಿಜೆಪಿಗೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದು ಪರಂಪರೆಯಿಂದ ಬಂದ ಗುಣ. ಮಹಿಳೆಯನ್ನು ನಿಂದಿಸಿ, ದೌರ್ಜನ್ಯವೆಸಗಿದ ಅರವಿಂದ್ ಲಿಂಬಾವಳಿ ವಿರುದ್ಧ ಯಾವ ಕ್ರಮ ಕೈಗೊಳ್ಳುವಿರಿ ಬಸವರಾಜ ಬೊಮ್ಮಾಯಿ ಅವರೇ? ಅಥವಾ ಈ ದೌರ್ಜನ್ಯಕ್ಕೆ ನಿಮ್ಮ ಬೆಂಬಲವೂ ಇದೆಯೇ? ಎಂದು ಕಿಡಿಕಾರಿದೆ.
'ಬೇಟಿ ಬಚಾವ್' ಆಗಬೇಕಿರುವುದು ಬಿಜೆಪಿಯ ಗೂಂಡಾಗಳಿಂದ!
ಮನುಶಾಸ್ತ್ರವನ್ನು ನಂಬುವ ಬಿಜೆಪಿಗೆ
ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದು ಪರಂಪರೆಯಿಂದ ಬಂದ ಗುಣ.ಮಹಿಳೆಯನ್ನು ನಿಂದಿಸಿ, ದೌರ್ಜನ್ಯವೆಸಗಿದ ಅರವಿಂದ್ ಲಿಂಬಾವಳಿ ವಿರುದ್ಧ ಯಾವ ಕ್ರಮ ಕೈಗೊಳ್ಳುವಿರಿ @BSBommai ಅವರೇ?
ಅಥವಾ ಈ ದೌರ್ಜನ್ಯಕ್ಕೆ ನಿಮ್ಮ ಬೆಂಬಲವೂ ಇದೆಯೇ?
— Karnataka Congress (@INCKarnataka) September 3, 2022
ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ ಎಂದಿದೆ.
ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ @BSBommai ಅವರು
ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು.ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ.#ಮಹಿಳಾವಿರೋಧಿಬಿಜೆಪಿ
— Karnataka Congress (@INCKarnataka) September 3, 2022