Wednesday, December 4, 2024

Latest Posts

ಯಾಕ್ರಿ ನಮ್ಮ ನಾಯಕರಿಗೆ ಅನ್ಯಾಯ ಮಾಡಿದ್ದೀರಾ…?

- Advertisement -

ಹುಬ್ಬಳ್ಳಿ: ಸಿಎಂ ಸ್ಥಾನಕ್ಕೆ ಹೋರಾಟ ನಡೆಸಿದ್ದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕಡೆಗೂ ಸಚಿವ ಸ್ಥಾನ ಕೈ ತಪ್ಪಿದ್ದು, ಬೆಲ್ಲದ ಅಭಿಮಾನಿಗಳಿಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದ್ದು, ಕಾರ್ಯಕರ್ತರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹೌದು.. ನಮ್ಮ ನಾಯಕರು ಸಾಕಷ್ಟು ಜನಸೇವೆ ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಿದ್ದಾರೆ. ಈ ಹಿಂದೆ ಸಚಿವರಾಗಿದ್ದ ಬೆಲ್ಲದ ಅವರ ತಂದೆ ಚಂದ್ರಕಾಂತ ಬೆಲ್ಲದ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಅಲ್ಲದೇ ಅರವಿಂದ ಬೆಲ್ಲದ ಅವರಿಗೆ ಹೈ ಕಮಾಂಡ್ ನಾಯಕರು ಅನ್ಯಾಯ ಮಾಡಿದ್ದಾರೆ ಎಂದು ಕಣ್ಣೀರು ಸುರಿಸಿದರು.

ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ನಾಯಕರ ಬಗ್ಗೆ ಹೈ ಕಮಾಂಡ್ ಅಸಡ್ಡೆ ತೋರಿರುವುದು ಸರಿಯಲ್ಲ. ಕೊನೆ ಗಳಿಗೆಯಲ್ಲಿ ಅರವಿಂದ ಬೆಲ್ಲದ ಅವರನ್ನು ಕೈ ಬಿಟ್ಟು ಕಾರ್ಯಕರ್ತರ ಮನಸ್ಸಿಗೆ ನೋವು ಮಾಡಿದ್ದಾರೆ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪೊಲೀಸರ ಮತ್ತ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಕರ್ನಾಟಕ ಟಿವಿ, ಹುಬ್ಬಳ್ಳಿ

- Advertisement -

Latest Posts

Don't Miss