Sunday, May 19, 2024

Latest Posts

ಓರ್ವ ತಾಯಿಯಾಗಿ ಆ ಜೀವಕ್ಕೆ ನ್ಯಾಯ ಒದಗಿಸುವುದು ನನ್ನ ಆದ್ಯವಾದ ಕರ್ತವ್ಯವಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್

- Advertisement -

Hubli Crime news: ಹುಬ್ಬಳ್ಳಿ: ನೇಹಾಳ ಸಾವಿಗೆ ನಿಷ್ಪಕ್ಷಪಾತ, ನಿಖರವಾದ ತನಿಖೆ ನಡೆಸಿ, ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಮೃತ ನೇಳಾದ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಹೇಯ ಕೃತ್ಯವಾಗಿದೆ. ಇದನ್ನು ಎಲ್ಲ ಸಮಾಜಗಳು ತೀವ್ರವಾಗಿ ಖಂಡಿಸಲೇಬೇಕು. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ ಎಂದರು.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಹಾಗೂ ಇಂತಹ ಘಟನೆಗಳು ಪದೇ ಪದೇ ಮರುಕಳಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದು ಸೂಕ್ಷ್ಮ ಸಂದರ್ಭ, ಹೀಗಾಗಿ ಜವಾಬ್ದಾರಿ ಸ್ಥಾನದಲ್ಲಿದ್ದು, ಅವರೊಂದಿಗೆ ನಾನು ಕೂಡಾ ಇದ್ದೇನೆ. ಕುಟುಂಬಕ್ಕೆ ಸಾಂತ್ವನ, ಸಮಾಧಾನ ಹೇಳಿದ್ದೇನೆ. ಆದರೂ ತೀರದಂತಹ ದುಃಖ ಕುಟುಂಬಕ್ಕಿದೆ. ಸಮೂದಾಯ ದೊಡ್ಡದಾಗಿದ್ದು, ಇಡೀ ಸಮಾಜ ಅವರೊಂದಿಗೆ ಇದೆ. ಬೇರೆ ಕಡೆಗಳಲ್ಲಿ ಆಗಿರುವ ಘಟನೆಗಳನ್ನು ಈ ಘಟನೆಗೆ ಹೋಲಿಕೆ ಮಾಡಿ ಮಾತನಾಡುವುದು ಸರಿಯಲ್ಲ ಎಂದರು.

ನೇಹಾ ಹತ್ಯೆ ಘಟನೆಯನ್ನು ರಾಜಕಾರಣ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಇಂತಹ ಘಟನೆಗಳಲ್ಲಿ ರಾಜಕಾರಣ ಬದಿಗಿಟ್ಟು, ಓರ್ವ ತಾಯಿಯಾಗಿ ಆ ಜೀವಕ್ಕೆ ನ್ಯಾಯ ಒದಗಿಸುವುದು ನನ್ನ ಆದ್ಯವಾದ ಕರ್ತವ್ಯವಾಗಿದೆ. ಇಂತಹ ಘಟನೆಗಳಲ್ಲಿ ರಾಜಕೀಯ ಕುರಿತು ಚರ್ಚೆ ಮಾಡಿದರೇ ತನಿಖೆಯ ಹಾದಿ ಬೇರೆ ಸ್ವರೂಪ ಪಡೆಯಲಿದೆ. ಹೀಗಾಗಿ ಹೆಚ್ಚು ಮಾತನಾಡುವುದಿಲ್ಲ ಎಂದರು.

ನೇಹಾ ತುಂಬಾ ಒಳ್ಳೆಯ ಹುಡುಗಿ : ಅವಳೇ ಮೊದಲು ಪ್ರಪೋಸ್ ಮಾಡಿದ್ದು: ಫಯಾಜ್ ತಾಯಿ ಮುಮ್ತಾಜ್

ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ಬೇರೆ ಯಾರ ಬಳಿ ಇಲ್ಲ, ನೀವೇ ಸಹಾಯ ಮಾಡಿ: ಜೋಶಿ ಬಳಿ ನೇಹಾ ತಂದೆ ಮನವಿ

ನೇಹಾ ಹ* ಕೇಸ್: ಫಯಾಜ್ ರುಂ*ಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

- Advertisement -

Latest Posts

Don't Miss