Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರದಲ್ಲಿ ಅಪರಾಧ ಕೃತ್ಯಗಳ ಹಿನ್ನೆಲೆ, ನಗರ ಪೊಲೀಸರು ವಿಶೇಷ ಕಾಾರ್ಯಾಚರಣೆ ನಡೆಸಿದ್ದಾರೆ.
ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 05 ಗಂಟೆವರೆಗೆ ಕಾರ್ಯಾಚರಣೆ ನಡೆಸಿದ್ದು, ಹು-ಧಾ ಪೊಲೀಸ್ ಘಟಕದ ಒಟ್ಟು 248 ಪೊಲೀಸ್ ಅಧಿಕಾರಿಗಳು ಏಕಕಾಲಕ್ಕೆ ಫೀಲ್ಡ್ ಗೆ ಇಳಿದಿದ್ದಾರೆ.
ಅವಳಿ ನಗರದ 72 ರೌಡಿಶೀಟರ್ ಮತ್ತು 46 MOB ಗಳ ಮನೆಗಳಲ್ಲಿ ತಪಾಸಣೆ ನಡೆಸಿದ್ದಾರೆ. ಅಲ್ಲದೇ, ಕಾನೂನು ಬಾಾಹಿರ ಮತ್ತು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದಿರುವಂತೆ ಸೂಚಿಸಲಾಗಿದೆ. ಬರೀ ರೌಡಿಶೀಟರ್ ಮನೆಗಳಿಗಲ್ಲದೇ, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೂ ಅಧಿಕಾರಿಗಳು ಎಚ್ಚರಿಕೆ ಕೊಟ್ಟಿದ್ದಾರೆ.
ಅಲ್ಲದೇ, ತಡರಾತ್ರಿ ನಗರದಲ್ಲಿ ಸಂಂಚರಿಸುತ್ತಿದ್ದ ಸುಮಾರು 150ಕ್ಕೂ ಹೆಚ್ಚು ವಾಹನಗಳ ತಪಾಸಣೆ ನಡೆಸಲಾಗಿದೆ. ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದವರ ವಿಚಾರಣೆ ನಡೆಸಿದ್ದು, 90ಕ್ಕೂ ಹೆಚ್ಚು ಜನಗಳ ಬೆರಳು ಮುದ್ರೆಗಳನ್ನು ಸ್ಕ್ಯಾನ್ ಮಾಡಿದ್ದಾರೆ. ಅವಳಿ ನಗರದಲ್ಲಿ ಕ್ರೈಂ ರೇಟ್ ಹೆಚ್ಚುತ್ತಿರುವ ಹಿನ್ನೆಲೆ, ಪೊಲೀಸರು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದಾರೆ.