ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ಅಶೋಕ್ ರಾವ್ ಅವರು ಇಂದು ನಿಧನ ಹೊಂದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.

ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆಯೇ ಅಂತಿಮ ಕ್ರಿಯೆಗಳನ್ನು ನೆರವೇರಿಸುವ ಸಾಧ್ಯತೆ ಇದೆ.

ಅಶೋಕ್ ರಾವ್ ಕನ್ನಡ ಚಿತ್ರರಂಗದ ಹಿರಿಯ ನಟರಾಗಿದ್ದು ಡಾ.ರಾಜ್‌ಕುಮಾರ್, ಶಂಕರ್ ನಾಗ್ ಸೇರಿದಂತೆ ಹಲವು ದಿಗ್ಗಜ ನಟರೊಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ. ಡಾ.ರಾಜ್‌ಕುಮಾರ್ ನಟಿಸಿದ್ದ ‘ಪರುಶುರಾಮ’ ಸಿನಿಮಾದಲ್ಲಿ ಖಳನಾಯಕ ಪಾತ್ರದಲ್ಲಿ ನಟಿಸಿದ್ದ ಅಶೋಕ್ ರಾವ್, ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧು ಚಂದ್ರಕೆ’ ಸಿನಿಮಾದಲ್ಲಿ ತನಿಖಾಧಿಕಾರಿಯ ಪಾತ್ರದಲ್ಲಿ ಹೆಚ್ಚು ಜನಪ್ರಿಯರು.

About The Author