Sunday, September 8, 2024

Latest Posts

ಪತ್ರದ ಮೂಲಕ ಧನ್ಯವಾದ ತಿಳಿಸಿದ ಅಪ್ಪು ಪತ್ನಿ, ಅಶ್ವಿನಿ ಪುನೀತ್ ರಾಜ್‌ಕುಮಾರ್..!

- Advertisement -

ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ಮರಣ ಈಗಲೂ ಎಲ್ಲರನ್ನು ಮುಖ್ಯವಾಗಿ ಅಭಿಮಾನಿಗಳನ್ನು ಕಾಡುತ್ತಲೇ ಇದೆ, ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಮಂದಿ ಭೇಟಿ ನೀಡುತ್ತಿರುವುದೆ ಇದಕ್ಕೆ ಸಾಕ್ಷಿ.

ಅಪ್ಪು ನಿಧನರಾದ ದಿನದಿಂದ ಇಲ್ಲಿಯವರೆಗೆ ಸರ್ಕಾರವು ಸಾಕಷ್ಟು ಮುತುವರ್ಜಿವಹಿಸಿ ಎಲ್ಲ ಕಾರ್ಯಗಳಲ್ಲಿಯೂ ಕುಟುಂಬದ ಜೊತೆ ನಿಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದಲೇ ಪುನೀತ್ ಅಂತಿಮ ದರ್ಶನ ಹಾಗೂ ಅಂತಿಮ ಸಂಸ್ಕಾರ ಕಾರ್ಯಗಳು ಸುಗಮವಾಗಿ ನೆರವೆರಿದೆ.

ಈಗಾಗಲೇ ಪುನೀತ್ ಸಹೋದರರಾದ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಸರ್ಕಾರ ನೀಡಿದ ನೆರವಿಗೆ ಧನ್ಯವಾದ ಹೇಳಿದ್ದಾರೆ. ಇದೀಗ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಸಿಬ್ಬಂದಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಪತ್ರ ಬರೆದಿರುವ ಅಶ್ವಿನಿ, ”ಪುನೀತ್ ರಾಜ್‌ಕುಮಾರ್ ಅಕಾಲಿಕ ಅಗಲಿಕೆ ನಮಗಷ್ಟೆ ಅಲ್ಲದೇ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ಪುನೀತ್ ಅವರು ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದವರು. ನಮ್ಮ ನೋವ್ನನು ಅಡಗಿಸಿಟ್ಟು ಅವರನ್ನು ಸಕಲ ಗೌರವಗಳೊಂದಿಗೆ ಕಳಿಸಿಕೊಡುವುದು ನಮ್ಮ ಜವಾಬ್ದಾರಿ ಆಗಿತ್ತು. ಇಂಥಹಾ ಸಂದರ್ಭದಲ್ಲಿ ಇಡೀಯ ಪೊಲೀಸ್ ಇಲಾಖೆ ನಮಗೆ ಬೆಂಬಲವಾಗಿ ನಿಂತು ಗೌರವಯುತವಾಗಿ ಅವರನ್ನು ಕಳಿಸಿಕೊಡಲು ಸಹಕರಿಸಿದೆ. ಅಂತಿಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡುವಲ್ಲಿ, ಮೆರವಣಿಗೆ ಮತ್ತು ಅಂತಿಮ ಸಂಸ್ಕಾರದ ಸಂದರ್ಭದಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಿ ಎಲ್ಲೂ ಕಾನೂನು ಸುವ್ಯವಸ್ಥೆಗೆ ನಮ್ಮಿಂದ ಧಕ್ಕೆಯಾಗದಂತೆ ನೋಡಿಕೊಂಡಿದ್ದೀರಿ. ನಿಮ್ಮ ಸಹಕಾರಕ್ಕೆ ನಮ್ಮ ಇಡೀ ಕುಟುಂಬ ಮತ್ತು ಎಲ್ಲಾ ಅಭಿಮಾನಿಗಳ ಪರವಾಗಿ ನಿಮಗೆ ಮತ್ತು ನಿಮ್ಮ ಎಲ್ಲಾ ಸಿಬ್ಬಂದಿಗಳಿಗೆ ಹೃದಯಪೂರ್ವಕ ಕೃತಜ್ಞತೆಗಳು” ಎಂದಿದ್ದಾರೆ ಅಶ್ವಿನಿ ಪುನೀತ್ ರಾಜ್‌ಕುಮಾರ್.

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬೆಂಗಳೂರು ನಗರ ಜಿಲ್ಲಾದಿಕಾರಿಯಾದ ಜೆ.ಮಂಜುನಾಥ್ ಸಹ ಪುನೀತ್ ರಾಜ್‌ಕುಮಾರ್ ಆಸ್ಪತ್ರೆಗೆ ದಾಖಲಾದಾಗಿನಿಂದಲೂ ಜೊತೆಗೆ ಇದ್ದರು. ಪುನೀತ್ ರಾಜ್‌ಕುಮಾರ್ ಅವರಿಗೆ ಆಪ್ತರಾಗಿದ್ದ ಬಸವರಾಜ ಬೊಮ್ಮಾಯಿ ಅಪ್ಪುಗೆ ಭಾವುಕದ ವಿದಾಯವನ್ನು ಹೇಳಿದರು. ಪವರ್ ಸ್ಟಾರ್ ನಿಧನವಾದ ದಿನದಿಂದ ಸತತ ಮೂರು ದಿನ ಕುಟುಂಬದ ಜೊತೆಗಿದ್ದು ಎಲ್ಲ ಕಾರ್ಯಗಳು ಸಲೀಸಾಗಿ ನೆರವೇರುವಂತೆ ನೋಡಿಕೊಂಡರು. ಕಳೆದ ಶುಕ್ರವಾರ ಸಹ ಪುನೀತ್ ನಿವಾಸಕ್ಕೆ ಸಿಎಂ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಸಾಂತ್ವನ ಹೇಳಿದರು. ಮತ್ತು ಇಂದು ನಡೆಯುತ್ತಿರುಯವ 11ನೇ ದಿನದ ಕಾರ್ಯದ ಬಗ್ಗೆ ಚರ್ಚೆ ನಡೆಸಿ ಹೋಗಿದ್ದಾರೆ.

ರೂಪೇಶ್, ಫಿಲಂ ಬ್ಯೂರೋ ಕರ್ನಾಟಕ ಟಿವಿ.

- Advertisement -

Latest Posts

Don't Miss