Hubli News: ನೇಹಾ ಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೀಳು ಮಟ್ಟದ ಹೇಳಿಕೆ ನೀಡಿದ್ದು, ಕೊಲೆಗಡುಕರಿಗೆ ಹೆದರಿಕೆ ಇಲ್ಲದಂತಾಗಿ. ಹಲ್ಲೆ, ಹತ್ಯೆ ಹಾಗೂ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರ ಟ್ರೇಡ್ ಮಾರ್ಕ ಆಗಿದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು.
ನಗರದ ವೀರಾಪುರು ಓಣಿಯಲ್ಲಿ ಹತ್ಯೆಯಾದ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿ, ವೈಕ್ತಿಕವಾಗಿ 50 ಸಾವಿರ ಚೆಕ್ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಪ್ರಕರಣದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ವರ್ತಿಸಬೇಕಿತ್ತು. ಜನ ಹೋರಾಟ ಮಾಡಿದ ಮೇಲೆ ಎಚ್ಚರಗೊಂಡು ಹೇಳಿಕೆ ಸಿಎಂರವರು ಎಚ್ಚೆರಗೊಂಡು ಹೇಳಿಕೆ ನೀಡಿದರು.
ಆದರೆ ಹೇಳಿಕೆಯನ್ನು ಗಂಭೀರವಾಗಿ ಅಂದು ನಿಡಲಿಲ್ಲ. ಅದರ ಪರಿಣಾಮ ಈ ಘಟನೆಗಳು ನಡೆದಿವೆ. ಕಳೆದ 4 ತಿಂಗಳಲ್ಲಿ ರಾಜ್ಯದಲ್ಲಿ 430 ಕೊಲೆ, 692 ರೈತರ ಆತ್ಮಹತ್ಯೆ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಈ ಮೊದಲೇ ಅಂಜಲಿ ಕುಟುಂಬಸ್ಥರು ಜೀವ ಬೆದರಿಕೆ ಇದೆ ಎಂದು ಠಾಣೆಗೆ ದೂರು ನೀಡಲು ಹೋದಾಗ ರಾಜಿ ಸಂಧಾನವನ್ನು ಏಕೆ ಮಾಡಬೇಕಿತ್ತು. ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಹಣ ತಗೆದುಕೊಂಡ ಪರಿಣಾಮ ಘಟನೆಗಳು ಆಗುತ್ತಿವೆ. ಸಿದ್ದರಾಮಯ್ಯ ಸರ್ಕಾರದ್ದು ಅಭಿವೃದ್ಧಿಯ ಸಮಾಧಿ, ಹತ್ಯೆ ಹಾಗೂ ಆತ್ಮಹತ್ಯೆ ಟ್ರೇಡ್ ಮಾರ್ಕ್ ಆಗಿದೆ ಇದೊಂದು ಜನರ ಜೀವಕ್ಕೆ ಗ್ಯಾರಂಟಿಯಿಲ್ಲದ ಸರ್ಕಾರ ಎಂದು ಆರೋಪಿಸಿದರು.
ಅಲ್ಲದೆ ನೇಹಾ ಹಾಗೂ ಅಂಜಲಿ ಕೊಲೆ ಪ್ರಕರಣವನ್ನು ತ್ವರಿತ ನ್ಯಾಯಾಲಯ ಮೂಲಕ ವಿಚಾರಣೆ ಮಾಡಬೇಕು. ಡ್ರಗ್ಸ್ ಮಾಫಿಯಾ ನಡೆಯುವಲ್ಲಿ ಪೊಲೀಸ್ ಚೌಕಿಗಳನ್ನು ನಿರ್ಮಾಣ ಮಾಡಬೇಕು. ಡ್ರಗ್ಸ್ ಮಾಫಿಯಾ ಬಗ್ಗೆ ಮಾಹಿತಿ ತಿಳಿಸಿದವರ ಹೆಸರನ್ನು ಗೌಪ್ಯವಾಗಿ ಇಡಬೇಕು. ಡ್ರಗ್ಸ್ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಎರಡು ಘಟನೆಗಳು ಸರ್ಕಾರದ ವೈಫಲ್ಯದಿಂದಲೇ ಆಗಿದೆ ಎಂಬುದನ್ನು ಗೃಹ ಸಚಿವರು ಒಪ್ಪಿಕೊಳ್ಳಬೇಕು. ಈ ಹಿಂದೆ ದೂರು ಕೊಡಲು ಹೋದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು. ಹೊಸ ದಕ್ಷ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಬೇಕು. ಕೆಲ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವ ಮೂಲಕ ಕಣ್ಣು ಒರೆಸುವ ತಂತ್ರವನ್ನು ರಾಜ್ಯ ಸರ್ಕಾರ ಮಾಡಬಾರದು. ಕಮೀಷನರೇಟ್ ನ್ನು ಎಸ್.ಪಿ ಮಟ್ಟಕ್ಕೆ ಇಳಿಸಿರುವ ಉದ್ದೇಶವೇನು? ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು ಅಗ್ರಹಿಸಿದರು.
ಜತೆಗೆ ಸ್ಥಳೀಯ ಶಾಸಕರ ಫೋಟೋ ಫೋಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾವಾಗಲಿ, ಅವರಾಗಲಿ ಇಂತಹ ಘಟನೆಗಳು ನಡೆದಾಗ ಸಂವೇದನಾಶೀಲರಾಗಿ ವರ್ತಿಸಬೇಕು. ಈ ಹಿಂದೆ ನಡೆದ ನೇಹಾ ಹತ್ಯೆ ಪ್ರಕರಣವನ್ನು ಸರ್ಕಾರ ತುಷ್ಟಿಕರಣಕ್ಕಾಗಿ ಬಳಕೆ ಮಾಡಿಕೊಂಡಿತ್ತು.ಈ ಎರಡು ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕು ಎಂದು ಗೃಹ ಸಚಿವರಿಗೆ ಆಗ್ರಹಿಸುತ್ತೇನೆ. ಅಂಜಲಿ ಕುಟುಂಬಸ್ಥರಿಗೆ ಕನಿಷ್ಠ 25 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಬೇಕು. ಮನೆ ನೀಡಬೇಕು. ನಮ್ಮ ಪಕ್ಷದಿಂದಲ್ಲೂ ಕುಟುಂಬಕ್ಕೆ ಸಹಾಯ ಮಾಡಲಾಗುವುದು ಎಂದು ತಿಳಿಸಿದರು.
ಕ್ರಿಮಿನಲ್‌ಗಳ ಜೊತೆ ಹುಬ್ಬಳ್ಳಿ ಪೊಲೀಸರ ಸಂಪರ್ಕ: ಅರವಿಂದ ಬೆಲ್ಲದ್ ಶಾಕಿಂಗ್ ಹೇಳಿಕೆ!
ಹ*ತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹ*ತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಹುಬ್ಬಳ್ಳಿಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ತಲೆದಂಡ