Wednesday, June 18, 2025

Latest Posts

ವರುಣಾ ಕ್ಷೇತ್ರದಲ್ಲಿ ಕಲಿಗಳ ಕಾಳಗ ನಡೆಯಬಹುದೇ ?

- Advertisement -

ವರುಣಾ ಕ್ಷೇತ್ರ:

ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರ ರಾಷ್ಟ್ರದ ಗಮನ ಸೆಳೆಯುವ ಹೈ ವೋಲ್ಟೇಜ್ ಕ್ಷೇತ್ರವಾಗಲಿದೆ. ಯಾಕಂದ್ರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಲ್ಲಿ ಸ್ಪರ್ಧಿಸೋದು ಕನ್‌ಫರ್ಮ್ ಆಗಿದೆ. ಇದೇ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಮುಂದಾಗಿರೋ ಬಿಜೆಪಿಗೆ, ವಿಜಯೇಂದ್ರಗಿಂತ ಟಫ್‌ ಕಾಂಪಿಟೇಟರ್‌ ಯಾರು ಸಿಗುತ್ತಿಲ್ಲ ಎನ್ನಲಾಗಿದೆ. ಬಿಜೆಪಿ ಕಾರ್ಯಕರ್ತರು ಕೂಡ ವಿಜಯೇಂದ್ರರೇ ಸೂಕ್ತ ಅಭ್ಯರ್ಥಿ ಅನ್ನೋ ಅಭಿಪ್ರಾಯ ನೀಡುತ್ತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಮಾತನಾಡಿರೋ ಸಿಎಂ ಬೊಮ್ಮಾಯಿ ವಿಜಯೇಂದ್ರ ಸ್ಪರ್ಧಿಸಬೇಕು ಅನ್ನೋದು ಕಾರ್ಯಕರ್ತರ ಒತ್ತಾಸೆಯಾಗಿದೆ. ಆದ್ರೆ, ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸಲಿದೆ ಎಂದಿದ್ದಾರೆ. ಕಾರ್ಯಕರ್ತರ ಒತ್ತಡ ಹೆಚ್ಚಾದರೆ ಪಕ್ಷವು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ಸ್ಪರ್ಧೆ ಖಚಿತ ಎಂಬ ಸುಳಿವು ಕೊಟ್ಟಿದ್ದಾರೆ. ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಖಾಸಗಿ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ತೆರಳಿ ಕೆಲವು ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ವರುಣಾದಲ್ಲಿ ಸ್ಪರ್ಧೆ ಖಚಿತ ಅನ್ನೋ ಸಂದೇಶ ಸಾರುತ್ತಿದೆ.

ಯಾವ ಸಮಯದಲ್ಲಿ, ಯಾವ ರೀತಿ ಮತ್ತು ಎಷ್ಟು ಆಹಾರವನ್ನು ಸೇವಿಸಬೇಕು..?

ಮೋದಿ ವಿರುದ್ಧ ಪೋಸ್ಟರ್ ಅಂಟಿಸಿದ್ದಕ್ಕೆ 8 ಮಂದಿ ಅರೆಸ್ಟ್..

ಐಪಿಎಲ್ ಉದ್ಘಾಟನಾ ಸಮಾರಂಭಲ್ಲಿ ನೃತ್ಯ ಪ್ರದರ್ಶನ ಮಾಡಲಿರುವ ತೆಲುಗು ನಟಿ ತಮನ್ನಾ ಭಾಟಿಯಾ

- Advertisement -

Latest Posts

Don't Miss