ಶೂಟಿಂಗ್ ವೇಳೆ ಮೃತಪಟ್ಟ ಸಹಾಯಕ ಫೈಟರ್

www.karnatakatv.net : ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಸಹಾಯಕ ಫೈಟರ್ ವಿವೇಕ್  ವಿದ್ಯುತ್ ತಗುಲಿ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಚಿತ್ರ ನಿರ್ದೇಶಕ ಆರ್.ಶಂಕರ್ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಮನಗರದ ಜಿಲ್ಲೆಯ ಜೋಗನದೊಡ್ಡಿ ಬಳಿಯಲ್ಲಿ ‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವನ್ನಪ್ಪಿದ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮೋಹನ್ ಕುಮಾರ್, ಇನ್ಸ್ ಪೆಕ್ಟರ್ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈಗಾಗಲೇ ಈ ಪ್ರಕರಣದಲ್ಲಿ ಸ್ಟಂಟ್ ಮಾಸ್ಟರ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದಂತ ಪೊಲೀಸರು, ಇದೀಗ ಲವ್ ಯೂ ರಚ್ಚು ಸಿನಿಮಾ ನಿರ್ದೇಶಕ ಆರ್.ಶಂಕರ್ ಅವರನ್ನು ಕೂಡ ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.

About The Author