- Advertisement -
state news :
ಕರ್ತವ್ಯ ನಿರತ ಸರ್ಕಲ್ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ಮೇಲೆ ಹಲ್ಲೆ ಮಾಡಿದ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣರನ್ನ ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ಯಲಚೇನಹಳ್ಳಿ 185ನೇ ವಾರ್ಡ್ನ ಮಾಜಿ ಕಾರ್ಪೋರೇಟರ್. ಪೊಲೀಸ್ ಠಾಣೆಯಲ್ಲಿ ನಿನ್ನೆ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣಗೆ ಹಾಗೂ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ನಡುವೆ ಪೊಲೀಸ್ ಠಾಣೆಯಲ್ಲಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಬಾಲಕೃಷ್ಣ ಇನ್ಸ್ ಪೆಕ್ಟರ್ ಕುತ್ತಿಗೆ ಪಟ್ಟಿ ಹಿಡಿದು ಹಲ್ಲೆ ಮಾಡಿದ್ದಾರೆ. ತಕ್ಷಣವೇ ಪೊಲೀಸರು ಬಾಲಕೃಷ್ಣರನ್ನ ಬಂಧಿಸಿದ್ದಾರೆ. ಸಿಪಿಐ ವಿಜಯಕುಮಾರ್ ನೀಡಿದ ದೂರಿನ ಮೇಲೆ ವಶಕ್ಕೆ ಪಡೆಯಲಾಗಿದೆ. ಇನ್ನೂ ಕಗ್ಗಲೀಪುರ ಠಾಣಾ ಪೊಲೀಸರು ಬಾಲಕೃಷ್ಣರನ್ನ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ.
- Advertisement -