ಎಟಿಎಂಗೆ ದುಡ್ಡು ಹಾಕುವಾಗ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ: ಓರ್ವ ಸಾವು, ಮತ್ತೋರ್ವನಿಗೆ ಗಾಯ

Bidar News: ಬೀದರ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ದುಡ್ಡು ಹಾಕುವ ವೇಳೆ ಗುಂಡಿನ ದಾಳಿ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನಿಗೆ ಗಂಭೀರವಾಗಿ ಗಾಯವಾಗಿದೆ.

ಸಿಬ್ಬಂದಿಗಳು ತಮ್ಮ ಗಾಾಡಿಯಲ್ಲಿ ಎಟಿಎಂಗೆ 93 ಲಕ್ಷ ರೂಪಾಯಿ ಹಣ ಹಾಕುತ್ತಿದ್ದ ಸಂದರ್ಭದಲ್ಲಿ, ಸಡನ್ನಾಗಿ ಬಂದ ಖದೀಮರು ಕಣ್ಣಿಗೆ ಖಾರದ ಪುಡಿ ಎರಚಿ, 5 ಸುತ್ತಿನ ಗುಂಡಿನ ದಾಳಿ ನಡೆಸಿದ್ದು, ಹಣ ಕದ್ದೊಯ್ದು ಪರಾರಿಯಾಗಿದ್ದಾರೆ.

ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

About The Author