Dharwad News: ಧಾರವಾಡ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ಉರಗ ರಕ್ಷಕನೂ ಆಗಿರುವ ಸೋಮಶೇಖರ್ ಎಂಬುವವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದ್ದಾರೆ.
ಈ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯ ಕೋಮಿನ ಜನರನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಕಾರ್ಯಕರ್ತರು ಉಪನಗರ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರಸಂಗ ನಡೆಯಿತು. ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಸೋಮಶೇಖರ್ ಅವರ ಮೇಲೆ ಅನ್ಯ ಕೋಮಿನ ಕೆಲವರು ಹಲ್ಲೆ ಮಾಡಿದ್ದಾರೆ. ಧಾರವಾಡದ ಹಳೇ ಎಪಿಎಂಸಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಇದನ್ನು ತಡೆದ ಸೋಮಶೇಖರ್ ಅವರ ಮೇಲೆ ಹಲ್ಲೆ ನಡೆದಿದೆ. ಇದರಿಂದ ಕಂಗಾಲಾಗಿರುವ ಬಜರಂಗದಳ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಧಾರವಾಡ ಉಪನಗರ ಠಾಣೆ ಎದುರು ಪ್ರತಿಭಟನೆ ನಡೆಸಿದರು.