ಸತ್ಯ ಒಪ್ಪಿಕೊಂಡು ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ಅಕ್ಷಮ್ಯ: ಹುಬ್ಬಳ್ಳಿ ಪ್ರಕರಣದ ವಿರುದ್ದ ಬೊಮ್ಮಾಯಿ ಅಸಮಾಧಾನ

Political News: ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರ ಮಾಡಿ ಹಲ್ಲೆ ಮಾಡಿದ್ದರ ಪ್ರಕರಣದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರು ಮಹಿಳೆ ಬಂಧನವಾದ ತಕ್ಷಣ ತಾನೇ ವಸ್ತ್ರ ತೆಗೆದು, ಪೋಲೀಸರ ಮೇಲೆ ಸುಳ್ಳು ಆರೋಪ ಮಾಡಿದ್ದಾಳೆ ಎಂದಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ ಮಾಜಿ ಸಿಎಂ, ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆ ಅತ್ಯಂತ ಕ್ರೂರ ಹಾಗೂ ಅಮಾನುಷ. ಇದು ಪೊಲೀಸರ ಕೈಯಿಂದ ನಡೆದಿರುವುದು ಗೃಹ ಇಲಾಖೆ ಸಂಪೂರ್ಣ ಹಿಡಿತ ಕಳೆದುಕೊಂಡಿರುವುದಕ್ಕೆ ಸಾಕ್ಷಿ. ರಕ್ಷಕರೇ ಭಕ್ಷಕರಾಗಿದ್ದಾರೆ.

ಪ್ರಕರಣ ಹೊರಬಂದ ಬಳಿಕ ಕಮಿಷನರ್ ಅದನ್ನು ಮುಚ್ಚಿಹಾಕಲು ಯತ್ನಿಸಿದ್ದು ಗಂಭೀರ ಅಪರಾಧ. ಕಾಂಗ್ರೆಸ್ ಕಾರ್ಪೊರೇಟರ್ ದೂರಿನ ಮೇರೆಗೆ ಕಾನೂನುಬಾಹಿರ ಬಂಧನ ನಡೆದಿದೆ. ಇನ್ಸ್‌ಪೆಕ್ಟರ್ ವರ್ಗಾವಣೆ ಮಾಡಿದರೂ ನೇರವಾಗಿ ಭಾಗಿಯಾದ ಕಾನ್ಸ್‌ಟೇಬಲ್ ಮೇಲೆ ಯಾವುದೇ ಕ್ರಮ ಇಲ್ಲ. ಸತ್ಯ ಒಪ್ಪಿಕೊಂಡು ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ಅಕ್ಷಮ್ಯ ಎಂದು ಮಾಜಿ ಸಿಎಂ ಹೇಳಿದ್ದಾರೆ.

About The Author