Thursday, June 19, 2025

Latest Posts

ಜಂಕಾರ್ ಮ್ಯೂಸಿಕ್ ಸಂಸ್ಥೆಗೆ ಭಾರೀ ಮೊತ್ತಕ್ಕೆ ಮಾರಾಟವಾಯಿತು “F0R REGN” ಚಿತ್ರದ ಆಡಿಯೋ ಹಕ್ಕು..

- Advertisement -

ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಟಿತ ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತ‌ ನೀಡಿ ಖರೀದಿಸಿದೆ.

ಈ ಚಿತ್ರದಲ್ಲಿ ಆರು ಹಾಡುಗಳಿದ್ದು, ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ ಹಾಗೂ ವಾಸುಕಿ ವೈಭವ್ ಹಾಡಿದ್ದಾರೆ. ಆರ್.ಕೆ.ಹರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು.

‘ಕಾಂತಾರ’ ಮೆಚ್ಚಿದ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್

ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರಬಾಕಿಯಿದ್ದು, ಉಳಿದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಉಡುಪಿ, ಮಂಗಳೂರು ಹಾಗೂ ಸಕಲೇಶಪುರದಲ್ಲಿ ಚಿತ್ರೀಕರಣ ನಡೆದಿದೆ.

” ದಿಯಾ” ಹಾಗೂ “ಲವ್ ಮಾಕ್ಟೇಲ್” ಚಿತ್ರಗಳ ಮೂಲಕ ಸಿನಿರಸಿಕರ ಮನಗೆದ್ದಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಜೋಡಿಯ ಈ ಚಿತ್ರದ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ. ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕಾಂತಾರ ಇದು ತುಳುನಾಡಿನ ಮಣ್ಣಿನ ಕಥೆ …!

ನಿಶ್ಚಲ್ ಫಿಲಂಸ್ ಮೂಲಕ ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ.

- Advertisement -

Latest Posts

Don't Miss