ಅಮಾಯಕರನ್ನು ಬಂಧಿಸಿದ್ದಲ್ಲಿ ಬಿಟ್ಟುಬಿಡಿ ಎಂಬ ಮಾತಿಗೆ ವಿರೋಧಿಸಿರುವ ಬಿ ವೈ ವಿಜಯೇಂದ್ರ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಗಲಭೆ ಕುರಿತಂತೆ ಒಂದು ಜವಾಬ್ದಾರಿ ವಿರೋಧ ಪಕ್ಷದಂತೆ ನಡೆದು ಕೊಳ್ಳುವುದನ್ನು ಬಿಟ್ಟು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸುತ್ತಿದೆ. ಅಮಾಯಕರನ್ನು ಬಿಟ್ಟುಬಿಡಿ, ಕೈ ಮುಖಂಡರನ್ನು ವಿಚಾರಣೆಗೆ ಕರೆಯುವುದು ತಪ್ಪು ಎಂಬ ನಿಮ್ಮ ನಡೆ ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

ಮಳೆಯ ಆರ್ಭಟದಿಂದ ಜನ ತತ್ತರಿಸಿ ಹೋಗಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದು, ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ. ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ. ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಮಾಜಿ ಸಚಿವ ಜಮೀರ್ ಅಹಮದ್‌ಗೆ ಕೊರೊನಾ ಕಾಣಿಸಿಕೊಂಡಿದ್ದು, ಇದನ್ನು ಟ್ವೀಟ್ ಮೂಲಕ ಸ್ವತಃ ಜಮೀರ್ ಅವರೇ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.
ಕೊಪ್ಪಳದ ಬಿಜೆಪಿ ಸಂಸದರಾಗಿರುವ ಸಂಗಣ್ಣ ಕರಡಿಯವರಿಗೂ ಕೋವಿಡ್ ಸೋಂಕು ಧೃಡಪಟ್ಟಿದ್ದು, ಅವರೇ ಈ ಕುರಿತು ಟ್ವಿಟರ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ. ನಾನು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಕೋವಿಡ್ ಸೋಂಕು ಧೃಡಪಟ್ಟಿದ್ದು ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ ಎಂದು ಸಂಗಣ್ಣ ಕರಡಿ ಟ್ವೀಟ್ ಮಾಡಿದ್ದಾರೆ.
ನಟ ಸುಶಾಂತ್ ಸಿಂಗ್ ಸಾವಿನ ಕೇಸನ್ನ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ವಹಿಸಲಾಗಿದ್ದು, ಆರೋಪಿಗಳಿಗೆ ನಡುಕ ಶುರುವಾಗಿದೆ. ಅಲ್ಲದೇ ಇವರೆಗೆ ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು, ತಮಗೆ ಸಿಕ್ಕ ಸಾಕ್ಷ್ಯಾಧಾರಗಳನ್ನ ಸಿಬಿಐ ಪೊಲೀಸರಿಗೆ ನೀಡಬೇಕೆಂದು ಆದೇಶಿಸಿದೆ. ಇದು ಸುಶಾಂತ್ ಕುಟುಂಬಕ್ಕೆ ಸಿಕ್ಕ ಮೊದಲ ಗೆಲುವಾಗಿದೆ. ಜೂ.14ರಂದು ಮುಂಬೈನ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್ ಶವ ಪತ್ತೆ ಆಯಿತು. ಈ ವೇಳೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಸುಶಾಂತ್ ಸಂಬಂಧಿಕರು ಹೇಳಿದ್ದರು. ಅಲ್ಲದೇ ಪಾಟ್ನಾದಲ್ಲಿ ಸುಶಾಂತ್ ತಂದೆ ಪ್ರಕರಣ ದಾಖಲಿಸಿ, ತನಿಖೆಗೆ ಒತ್ತಾಯಿಸಿದ್ದರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.