ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತ ರತ್ನ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಭಾರತ ದುಃಖಿಸಿದೆ. ರಾಷ್ಟ್ರದ ಅಭಿವೃದ್ಧಿಯ ಪಥದಲ್ಲಿ ಅವರು ತಮ್ಮ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಸಮಾಜದ ಎಲ್ಲಾ ವರ್ಗ ಮೆಚ್ಚಿದ ರಾಜಕಾರಣಿಯಾಗಿದ್ದರು ಎಂದು ಟ್ವೀಟ್ ಮೂಲಕ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.

ಈ ಬಾರಿಯ ಮೋದಿ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಲೈಕ್ಸ್‌ಗಿಂತ ಡಿಸ್‌ಲೈಕ್ಸ್ ಹೆಚ್ಚಿಗೆ ಬಂದಿದೆ. ಪ್ರತಿ ತಿಂಗಳ ಕೊನೆ ರವಿವಾರದಂದು ಮನ್ ಕೀ ಬಾತ್ ಹೇಳುತ್ತಿದ್ದ ಮೋದಿಯವರ ವೀಡಿಯೋವನ್ನ ಯ್ಯೂಟೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗುತ್ತಿತ್ತು. ಪ್ರತೀ ಬಾರಿ ಡಿಸ್‌ಲೈಕ್ಸ್‌ಗಿಂತಲೂ ಲೈಕ್ಸ್ ಹೆಚ್ಚಿಗೆ ಬರುತ್ತಿತ್ತು. ಆದ್ರೆ ಈ ಬಾರಿ ಡಿಸ್‌ಲೈಕ್ ಹೆಚ್ಚಿಗೆ ಬಂದಿದೆ.
ಸಚಿವ ಸುಧಾಕರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆ. ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ.
ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ ಎಂದು ಕಿಡಿಕಾರಿದ್ದಾರೆ.
ಕೊರೊನಾದಿಂದ ಗುಣ ಮುಖರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇನ್ನು ಕೆಲ ದಿನಗಳಲ್ಲೇ ಬಾದಾಮಿ ಕ್ಷೇತ್ರಕ್ಕೆ ಭೇಟ್ ಕೊಡಲಿದ್ದಾರೆಂದು ಟ್ವೀಟ್ ಮೂಲಕ ತಿಳಿಸಿದ್ದರು. ಆದ್ರೆ ಇಂದು ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರ ಜೊತೆ ಸೇರಿ ಸಭೆ ನಡೆಸಿದ್ದಾರೆ. ಪಕ್ಷದ ರಾಜಕೀಯ ನಡೆದಳ ಕುರಿತು ಪಕ್ಷದ ಕೆಲವು ಮುಖಂಡರ ಜೊತೆ ಸಭೆ ನಡೆಸಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.