ಅಮೆಜಾನ್ ಪ್ರೈಮ್ ನಲ್ಲೂ "ಲಂಕೆ"ಗೆ ಜೈ ಅಂದ ಪ್ರೇಕ್ಷಕ.
ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಮಯದಲ್ಲಿ ಅಂದರೆ, ಕಳೆದವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಚಿತ್ರ "ಲಂಕೆ".
ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ "ಲಂಕೆ" ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ...
ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ.
ಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಅವರು ಇಂದು ವಿಧಿವಶರಾಗಿದ್ದಾರೆ. 66ವಯಸ್ಸಿನ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಒಬ್ಬ ಮಗ, ಒಬ್ಬ ಮಗಳನ್ನು ಪ್ರಸನ್ನ ಅವರು ಅಗಲಿದ್ದಾರೆ.
ಪ್ರಸನ್ನ ಅವರು ಗೊರವನಹಳ್ಳಿ ದೇವಸ್ಥಾನದ ಸಂಸ್ಥಾಪಕರಾದ ಕಮಲಮ್ಮ ಅವರ ಪುತ್ರರು . ಕಮಲಮ್ಮ...
ಬಾಗಲಕೋಟೆ: ಸಾಮಾಜಿಕ ಜಾಲತಾಣದಲ್ಲಿ ಈಗ ಜನನ ಪ್ರಮಾಣಪತ್ರವೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಎರಡನೇ ವಿವಾಹ ಆಗಿಬಿಟ್ರಾ ಎನ್ನುವ ಸಂದೇಶವನ್ನು ಹುಟ್ಟುಹಾಕಿದೆ. ಆ ಕುರಿತು ಮಾಜಿ ಎಂ.ಎಲ್ ಎ ಏನ್ ಹೇಳಿದ್ರು ಅಂತ ಮುಂದೆ ಓದಿ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಯಾವುದೇ ಮಾಹಿತಿ ಇಲ್ಲ. ದಾಖಲೆ...
ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ.
ಕನ್ನಡದ ಹೆಸರಾಂತ ನಟ ಶಕ್ತಿಪ್ರಸಾದ್ ಪತ್ನಿ, ದಕ್ಷಿಣ ಭಾರತದ ಪ್ರಸಿದ್ದ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಮ್ಮ ಅವರು ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
ಲಕ್ಷ್ಮೀದೇವಮ್ಮ ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಕಿಶೋರ್ ಸರ್ಜಾ, ಅರ್ಜುನ್ ಸರ್ಜಾ ಹಾಗೂ ಅಮ್ಮಾಜಿ ಅವರು...
ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...
ಬೆಂಗಳೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸುಮಾರು 85 ಕೋಟಿ ರೂ.ನಷ್ಟು ಹಣವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಪ್ರಭಾವದಿಂದ ಇತರೆ ಕಾಮಗಾರಿಗಳಿಗೆ ವರ್ಗಾವಣೆ ಮಾಡಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಕರ್ನಾಟಕ ಮುಕ್ತ ವಿವಿ ವತಿಯಿಂದ ಮಾಡಲಾದ ವಿವಿದ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದೆಲ್ಲದರ ವಿರುದ್ಧ ನ್ಯಾಯಾಂಗ...
ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ "ಬನಾರಸ್" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ.
"ಬನಾರಸ್" ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ...
ಬೆಂಗಳೂರು: ನನ್ನ ಲೆವೆಲ್ ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಂದು ತಮ್ಮ...
ಬೆಂಗಳೂರು: ‘ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತನ್ನಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳು ಮುಖ್ಯಮಂತ್ರಿ ಸ್ಥಾನ...
ಬೆಳಗಾವಿ: ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಈ ಮೂಲಕ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬುದಾಗಿ ಹೇಳಿದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಟಕ್ಕರ್ ಕೊಟ್ಟಿದ್ದಾರೆ.
ಆಗಸ್ಟ್ 3ರಂದು ನಡೆಯಲಿರುವ ವಿರೋಧ...